ಕರಾವಳಿ

ವಾಯುಭಾರ ಕುಸಿತ ಹಿನ್ನೆಲೆ : ಮೀನುಗಾರಿಕಾ ದೋಣಿಗಳು ಕೂಡಲೇ ದಡ ಸೇರುವಂತೆ ಆದೇಶ

Pinterest LinkedIn Tumblr

ಮಂಗಳೂರು ಮೇ 31 :ಮೀನುಗಾರಿಕೆ ನಿರ್ದೇಶಕರು, ಬೆಂಗಳೂರು ಹಾಗೂ ಕೋಸ್ಟ್‌ಗಾರ್ಡ್, ಮಂಗಳೂರು ಇವರು ಇ-ಮೇಲ್ ಮೂಲಕ ನೀಡಿದ ಹವಾಮಾನ ಮುನ್ಸೂಚನೆಯಂತೆ ಮೇ 31 ರಿಂದ ಜೂನ್ 04 ರವರೆಗೆ ಅರಬ್ಬಿ ಸಮುದ್ರದ ಆಗ್ನೇಯ ಮತ್ತು ಅದರ ಸುತ್ತಮುತ್ತಲಿನ ಪ್ರದೇಶದಲ್ಲಿ ವಾಯುಭಾರ ಕುಸಿತವಾಗುವ ಸಂಭವವಿರುತ್ತದೆ.

ಇದರಿಂದ ಸಮುದ್ರವು ಪ್ರಕ್ಷುಬ್ಧವಾಗುವುದರಿಂದ ಅನಾಹುತವನ್ನು ತಡೆಯುವ ಸಲುವಾಗಿ ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕೆ ದೋಣಿಗಳು ಕೂಡಲೇ  ದಡ ಸೇರುವಂತೆ ಎಲ್ಲಾ ಮೀನುಗಾರರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ ಎಂದು ಮಂಗಳೂರು ಮೀನುಗಾರಿಕೆ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

Comments are closed.