ಮಂಗಳೂರು,ಜೂನ್.04 : ಸಮುದಾಯ ಆರೋಗ್ಯ ಕೇಂದ್ರಗಳಿಗೆ ಡಯಾಲಿಸಿಸ್ ಯಂತ್ರವನ್ನು ನೀಡಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಇಂದು ವೈದ್ಯಕೀಯ ಸಚಿವರಿಗೆ ಮನವಿ ಮಾಡಿದ್ದಾರೆ.
ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅವರು ಪ್ರಾಸ್ತಾವಿಕವಾಗಿ ಮಾತನಾಡುತ್ತಾ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಡಯಾಲಿಸಿಸ್ ಮಾಡಬೇಕು ಎಂದು ಸಾರ್ವಜನಿಕರ ಬೇಡಿಕೆ ಇದೆ. ಈ ಹಿನ್ನೆಲೆಯಲ್ಲಿ ತ್ವರಿತವಾಗಿ ಮಂಜೂರು ಮಾಡಬೇಕು ಎಂದು ಆಗ್ರಹಿಸಿದರು.
ಜಿಲ್ಲೆಯಲ್ಲಿ ಇನ್ನೂ ಹೆಚ್ಚು ಕೋವಿಡ್ ಪ್ರಯೋಗಾಲಯಗಳನ್ನು ಸ್ಥಾಪಿಸಬೇಕು ಅದೇ ರೀತಿ ಲ್ಯಾಬ್ ಟೆಕ್ನಿಷನ್ ಗಳನ್ನು ಕೂಡ ಒದಗಿಸಬೇಕು ಎಂದು ಅವರು ಮನವಿ ಮಾಡಿದರು.
Comments are closed.