ಮಂಗಳೂರು : ಬಂಟ್ವಾಳ ತಾಲೂಕಿನ 108 ಆಂಬ್ಯುಲೆನ್ಸ್ ಚಾಲಕ ಮತ್ತು ಸಿಬ್ಬಂದಿಗಳಿಗೆ ಗೌರವಾರ್ಪಣೆ ಮತ್ತು ಮಾಣಿ ಬಂಟರ ಸಂಘದ ಪ್ರಾಯೋಜಕತ್ವದಲ್ಲಿ ಆಹಾರ ಸಾಮಗ್ರಿಗಳ ಕಿಟ್ ವಿತರಣಾ ಕಾರ್ಯಕ್ರಮವು ಮಾಣಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಿತು.
ಮಾಣಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶಶಿಕಲಾ ಮಾತನಾಡಿ 108 ಆಂಬ್ಯುಲೆನ್ಸ್ ನಿರ್ವಾಹಕರ ಸೇವೆ ನಿಜಕ್ಕೂ ಅದ್ಭುತ. ತಾಲೂಕಿನ ಯಾವುದೇ ಮೂಲೆಯಿಂದ ಅನಾರೋಗ್ಯ ಪೀಡಿತರನ್ನು ಜಿಲ್ಲಾಸ್ಪತ್ರೆಗೆ ಸಾಗಿಸುತ್ತಿರುವುದು ಮತ್ತು ಕತ್ಯರ್ವವನ್ನು ಪ್ರಾಮಾಣಿಕವಾಗಿ ಮಾಡುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ 108 ಆಂಬ್ಯುಲೆನ್ಸ್ ಚಾಲಕರು ಮತ್ತು ನಿರ್ವಾಹಕರಿಗೆ ಕಿಟ್ ವಿತರಿಸಲಾಯಿತು. ಇದಕ್ಕೆ ಸಹಕರಿಸಿದ ವೈದ್ಯಾಧಿಕಾರಿ ಡಾ.ಶಶಿಕಲಾ ಮತ್ತು ಜಿಲ್ಲಾ ಕಾರ್ಯಕ್ರಮ ಸಂಯೋಜಕಿ ತೇಜಶ್ರೀ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.
ಸಮಾರಂಭದಲ್ಲಿ ಜಿಲ್ಲಾ ಕಾರ್ಯಕ್ರಮ ಸಂಯೋಜಕ ಗುರುರಾಜ್ ನಾಯಕ್, ಮಹಾಬಲ, ಜಿಲ್ಲಾ 108 ವಾಹನ ನಿರ್ವಾಹಕ ವೆಂಕಟೇಶ್, ಜಿಲ್ಲಾ ಆಶಾ ಕಾರ್ಯಕರ್ತರ ಮೇಲ್ವಿಚಾರಕಿ ಕುಮುದಾ, ಮತ್ತಿತರರು ಉಪಸ್ಥಿತರಿದ್ದರು.
Comments are closed.