ಕರಾವಳಿ

ಮುಂಬೈನಿಂದ ಮಂಗಳೂರಿಗೆ ಬಂದಿದ್ದ ಯುವಕ ಕೊರೋನಾಗೆ ಬಲಿ ; ದ.ಕ.ಜಿಲ್ಲೆಯಲ್ಲಿ ಮೃತರ ಸಂಖ್ಯೆ ಎಂಟಕ್ಕೇರಿಕೆ

Pinterest LinkedIn Tumblr

ಮಂಗಳೂರು, ಜೂನ್.14 : ಅನ್ಯರೋಗದಿಂದ ಬಳಲುತ್ತಿದ್ದ ಯುವಕ ಮೃತಪಟ್ಟಿದ್ದು, ಇವರ ಗಂಟಲು ದ್ರವ‌ ಮಾದರಿಯ ವರದಿಯಲ್ಲಿ ಕೊರೋನ ಸೋಂಕು ಇರುವುದು ದೃಢಪಟ್ಟಿರುವುದರಿಂದ ದಕ್ಷಿಣ ಕನ್ನಡ ‌ಜಿಲ್ಲೆಯಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ ಎಂಟಕ್ಕೇರಿದೆ.

ಮುಂಬೈನಿಂದ ಇತ್ತೀಚೆಗೆ ಮಂಗಳೂರಿಗೆ ಆಗಮಿಸಿದ್ದ 26 ವರ್ಷದ ಯುವಕ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು, ಜೂ.12ರ ರಾತ್ರಿ ಯುವಕನ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದ್ದರಿಂದ ಈತನನ್ನು ನಗರದ ಖಾಸಗಿ ಆಸ್ಪತ್ರೆಗೆ ಕರೆತರುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

ಈತನ ಗಂಟಲು ದ್ರವ‌ ಮಾದರಿಯ ವರದಿಯಲ್ಲಿ ಕೊರೋನ ಸೋಂಕು ಇರುವುದು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೋನ ಸಂಪರ್ಕದಿಂದಾಗಿ ಮೃತಪಟ್ಟವರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ.

ಮುಂಬೈನಿಂದ ಇತ್ತೀಚೆಗೆ ಮಂಗಳೂರಿಗೆ ಆಗಮಿಸಿದ್ದು, ಈತನನ್ನು ಮೇ 28 ಮತ್ತು 29 ರಂದು ಜಿಲ್ಲಾಡಳಿತದ ಅಧೀನದ ಕ್ವಾರಂಟೈನ್ ನಲ್ಲಿ ಇರಿಸಲಾಗಿತ್ತು. ಈತ “ದೀರ್ಘಕಾಲದ ಮೂತ್ರಪಿಂಡ ಕಾಯಿಲೆ” ಯಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ವಿಶೇಷ ವರ್ಗಕ್ಕೆ ಸೇರ್ಪಡೆಗೊಂಡ ಕಾರಣ ಯುವಕನು ಜೂ.10ರವರೆಗೆ ಹೋಮ್ ಕ್ವಾರಂಟೈನ್ ಪೂರೈಸಿದ್ದರು.

ಪ್ರಮುಖ ಅಂಶಗಳು :

ದಕ್ಷಿಣ ಕನ್ನಡ ‌ಜಿಲ್ಲೆಯಲ್ಲಿ ಕೊರೋನಾಗೆ ಎಂಟನೇ ಬಲಿ
ಮಹಾರಾಷ್ಟ್ರದಿಂದ ಬಂದಿದ್ದ 26 ವರ್ಷದ ಯುವಕ ಸಾವು
ಮಹಾರಾಷ್ಟ್ರದಿಂದ ಬಂದು ಕ್ವಾರೆಂಟೈನ್ ‌ಮುಗಿಸಿ ಮನೆಗೆ ಹೋಗಿದ್ದ ಯುವಕ
ಕಿಡ್ನಿ ಸಮಸ್ಯೆ ಹಿನ್ನೆಲೆ ಮತ್ತೆ ‌ನಗರದ ಖಾಸಗಿ ಆಸ್ಪತ್ರೆಗೆ ದಾಖಲು
ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಯುವಕ ಸಾವು
ಕೋವಿಡ್ ಪರೀಕ್ಷೆ ವೇಳೆ ಕೊರೋನಾ ಇರುವುದು ದೃಢ.

Comments are closed.