ಮಂಗಳೂರು : ಕದ್ರಿ ಉದ್ಯಾನವನ ಪರಿಸರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ನಡೆಯುವ ಅಭಿವೃದ್ಧಿ ಕಾಮಗಾರಿಗಳನ್ನು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಪರಿಶೀಲಿಸಿದರು.
ಈ ಕುರಿತು ಮಾತನಾಡಿದ ಶಾಸಕ ಕಾಮತ್, ಕದ್ರಿ ಉದ್ಯಾನವನ ಪರಿಸರದಲ್ಲಿ ಈಗಾಗಲೇ ಅಭಿವೃದ್ಧಿ ಕಾಮಗಾರಿಗಳ ಪ್ರಾರಂಭವಾಗಿದೆ. 12 ಕೋಟಿ ವೆಚ್ಚದಲ್ಲಿ ನಡೆಯುವ ಅಭಿವೃದ್ಧಿ ಕಾಮಗಾರಿಯ ರೂಪುರೇಷೆ ಹಾಗೂ ಸಾರ್ವಜನಿಕ ಅಭಿಪ್ರಾಯಗಳ ಪರಿಶೀಲನೆಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಉದ್ಯಾನವನದ ಅಭಿವೃದ್ಧಿ, ಈ ಪರಿಸರದಲ್ಲಿ ರಸ್ತೆ ಅಭಿವೃದ್ಧಿ ಸೇರಿದಂತೆ ಅನೇಕ ಕಾಮಗಾರಿಗಳ ಈ ಯೋಜನೆಯಲ್ಲಿ ಒಳಗೊಂಡಿದೆ. ಈ ಯೋಜನೆಯಿಂದ ಗೋರಕ್ಷನಾಥ ಸಭಾಂಗಣದ ಸುತ್ತ ಮುತ್ತಲಿನ ನಿವಾಸಿಗಳಿಗೆ ವಿಶೇಷ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.
ಈಗಾಗಲೇ ಸ್ಮಾರ್ಟ್ ಸಿಟಿ ಯೋಜನೆಯಡಿ ನಡೆಯುವ ಕಾಮಗಾರಿಗಳು ವೇಗವಾಗಿ ಸಾಗುತ್ತಿದೆ. ನಗರದ ವಿವಿಧ ವಾರ್ಡ್ ಗಳಲ್ಲಿ ಕಾಮಗಾರಿ ಪ್ರಗತಿಯ ಹಂತದಲ್ಲಿದೆ. ಹೊಸ ಯೋಜನೆಗಳ ಅನುಷ್ಟಾನಕ್ಕೆ ಯೋಜನೆ ರೂಪಿಸಬೇಕಿದೆ ಎಂದರು.
ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಮೇಯರ್ ದಿವಾಕರ್ ಪಾಂಡೇಶ್ವರ, ಪಾಲಿಕೆ ಸದಸ್ಯರಾದ ಶಕಿಲ ಕಾವಾ, ಕದ್ರಿ ಮನೋಹರ್ ಶೆಟ್ಟಿ, ಸ್ಮಾರ್ಟ್ ಸಿಟಿ ಅಧಿಕಾರಿ ನಜೀರ್, ಸ್ಮಾರ್ಟ್ ಸಿಟಿ ಅಧಿಕಾರಿಗಳು, ತೇಟಗಾರಿಕೆ ಇಲಾಖೆ ಅಧಿಕಾರಿಗಳು, ಬಿಜೆಪಿ ಮುಖಂಡರಾದ ವಸಂತ್ ಜೆ ಪೂಜಾರಿ, ವೆಂಕಟೇಶ್, ಚರಿತ್ ಪೂಜಾರಿ ಹಾಗೂ ಕಾರ್ಯಕರ್ತರು, ಜೋಗಿ ಸಮಾಜ ಸುಧಾರಕ ಸಂಘದ ಪ್ರಮುಖರು ಉಪಸ್ಥಿತರಿದ್ದರು.
Comments are closed.