ಕರಾವಳಿ

ದ.ಕ.ಜಿಲ್ಲೆಯಲ್ಲಿ ಹುಟ್ಟುವ ಪ್ರತೀ ಮಗುವಿನ ಜನನ ದಾಖಲೆ ಕಡ್ಡಾಯವಾಗಿ ನೋಂದಣಿಗೆ ಸೂಚನೆ

Pinterest LinkedIn Tumblr

ಮಂಗಳೂರು : ಜಿಲ್ಲೆಯ ಪ್ರತಿಯೊಂದು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜನನವಾಗಿರುವ ಮಗುವಿನ ದಾಖಲೆಯನ್ನು ಪತ್ರಿ ತಿಂಗಳು ಕಡ್ಡಾಯವಾಗಿ ದಾಖಲಿಸಿಕೊಂಡು ವರ್ಷದ ಅಂತ್ಯದಲ್ಲಿ ಅಧಿಕಾರಿಗಳು ವರದಿ ಸಲ್ಲಿಸಬೇಕು ಎಂದು ಜಿಲ್ಲಾ ಆರೋಗ್ಯಧಿಕಾರಿ ಡಾ.ರಾಮಚಂದ್ರ ಬಾಯಾರಿ ತಿಳಿಸಿದರು.

ಅವರು ಜನನ ಪೂರ್ವ ಲಿಂಗ ನಿರ್ಣಯ ತಡೆ ಕಾಯಿದೆ 1994ರ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ ಗ್ರಾಮ ಪಂಚಾಯತ್‌ನಿಂದ ಲಿಂಗಾನುಪಾತದ ವರದಿ ಪಡೆದುಕೊಂಡು ಕಡಿಮೆ ಲಿಂಗಾನುಪಾತ ಹೊಂದಿರುವ ಗ್ರಾಮಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ 156 ಸ್ಕ್ಯಾನಿಂಗ್ ಸೆಂಟರ್‌ಗಳಿದ್ದು, ಸೂಕ್ತ ದಾಖಲೆ ಹೊಂದಿರದ ಸ್ಕ್ಯಾನಿಂಗ್ ಸೆಂಟರ್ ಹಾಗೂ ಪರವಾನಿಗೆ ಇಲ್ಲದೇ ಇರುವ ಸೆಂಟರ್‌ಗಳ ಮೇಲೆ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಿ ಎಂದು ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಸಲಹಾ ಸಮಿತಿಯ ಸದಸ್ಯರು, ವಿವಿಧ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

Comments are closed.