ಕರಾವಳಿ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಡಾ ಪಿ ಎಸ್ ಹರ್ಷ ಅಧಿಕಾರ ಸ್ವೀಕಾರ

Pinterest LinkedIn Tumblr

ಬೆಂಗಳೂರು, ಜೂನ್ 29 :ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಮಂಗಳೂರು ಪೊಲೀಸ್ ಕಮಿಷನರ್ ಆಗಿದ್ದ ಹಿರಿಯ ಪೊಲೀಸ್ ಅಧಿಕಾರಿ ಡಾ ಪಿ ಎಸ್ ಹರ್ಷ ಅವರು ಸೋಮವಾರ ಇಲ್ಲಿ ಅಧಿಕಾರ ಸ್ವೀಕರಿಸಿದರು.

ಡಾ ಪಿ ಎಸ್ ಹರ್ಷ ಅವರು ಈ ಹಿಂದೆಯೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಎಸ್ ಎನ್ ಸಿದ್ದರಾಮಪ್ಪ ಅವರು ಡಾ ಪಿ ಎಸ್ ಹರ್ಷ ಅವರಿಗೆ ಅಧಿಕಾರ ಹಸ್ತಾಂತರಿಸಿ ಎಲ್ಲ ರೀತಿಯಲ್ಲೂ ಒಳಿತಾಗಲಿ ಎಂದು ಶುಭ ಹಾರೈಸಿದರು.

ಎಸ್ ಎನ್ ಸಿದ್ದರಾಮಪ್ಪ ಅವರು ಬೆಂಗಳೂರಿನ ಸಿ ಐ ಡಿ ಯ ಆರ್ಥಿಕ ಅಪರಾಧಗಳ ವಿಭಾಗದ ಡೆಪ್ಯುಟಿ ಇನ್ಸ್‍ಪೆಕ್ಟರ್ ಜನರಲ್ ಆಫ್ ಪೊಲೀಸ್ ಆಗಿ ಅಧಿಕಾರ ಸ್ವೀಕರಿಸಿದ್ದಾರೆ.

ಮುಖ್ಯಮಂತ್ರಿಗಳ ಭೇಟಿ :

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಡಾ ಪಿ ಎಸ್ ಹರ್ಷ ಅವರು ಮುಖ್ಯಮಂತ್ರಿಗಳ ಕಚೇರಿಗೆ ಭೇಟಿ ನೀಡಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಜೊತೆ ಚರ್ಚಿಸಿದರು.

Comments are closed.