ಕರಾವಳಿ

ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾದ ವಿಕಾಸ್ ಕುಮಾರ್ ಅಧಿಕಾರ ಸ್ವೀಕಾರ

Pinterest LinkedIn Tumblr

ಮಂಗಳೂರು, ಜೂನ್.29: ಮಂಗಳೂರು ಪೊಲೀಸ್ ಕಮಿಷನರ್ ಆಗಿದ್ದ ಹಿರಿಯ ಪೊಲೀಸ್ ಅಧಿಕಾರಿ ಡಾ ಪಿ ಎಸ್ ಹರ್ಷ ಅವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ನೇಮಕಗೊಂಡಿರುವ ವಿಕಾಸ್ ಕುಮಾರ್ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು.

ನೂತನ ಅಯುಕ್ತರಾದ ವಿಕಾಸ್ ಕುಮಾರ್ ಅವರು ಈ ಹಿಂದೆ ಚಿಕ್ಕಮಗಳೂರು ಎಸ್ಪಿಯಾಗಿ, ಆಂತರಿಕ ಭದ್ರತೆ ವಿಭಾಗ ಮತ್ತು ನಕ್ಸಲ್ ನಿಗ್ರಹ ಪಡೆಯ ಡಿಐಜಿಯಾಗಿ ಕರ್ತವ್ಯ ನಿರ್ವಹಿಸಿದ್ದರು.

ಈಗಾಗಲೆ ವರ್ಗಾವಣೆಗೊಂಡಿರುವ ಮಂಗಳೂರಿನ ನಿಕಟಪೂರ್ವ ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ಅವರು ಬೆಂಗಳೂರಿನ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಡೆಪ್ಯುಟಿ ಇನ್‌ಸ್ಪೆಕ್ಟರ್ ಜನರಲ್ ಆಯಂಡ್ ಕಮಿಷನರ್ ಆಗಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ.

ಮುಖ್ಯಮಂತ್ರಿಗಳ ಭೇಟಿ :

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಡಾ ಪಿ ಎಸ್ ಹರ್ಷ ಅವರು ಮುಖ್ಯಮಂತ್ರಿಗಳ ಕಚೇರಿಗೆ ಭೇಟಿ ನೀಡಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಜೊತೆ ಚರ್ಚಿಸಿದ್ದಾರೆ.

Comments are closed.