ಕರಾವಳಿ

ದ.ಕ.ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ 18ನೇ ಬಲಿ : ಕಲ್ಲಡ್ಕದ ಯುವಕ ಮೃತ್ಯು

Pinterest LinkedIn Tumblr

ಮಂಗಳೂರು, ಜು 02 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಕ್ಕೆ ಮತ್ತೊಂದು ಬಲಿಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 18ಕ್ಕೇರಿಕೆಯಾಗಿದೆ.

ಕಳೆದ 20 ದಿನಗಳಿಂದ ಮನೆಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಬಂಟ್ವಾಳ ತಾಲೂಕಿನ ಕಲ್ಕಡ್ಕ ನಿವಾಸಿಯಾಗಿರುವ 49 ವರ್ಷದ ವ್ಯಕ್ತಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಶನಿವಾರ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಿಡ್ನಿ, ಟಿ.ಬಿ.ಹಾಗೂ ಲಿವರ್ ನ ಸಮಸ್ಯೆಯಿಂದ ಬಳಲುತ್ತಿದ್ದ ಇವರಲ್ಲಿ ಸೊಂಕು ಪತ್ತೆಯಾಗಿತ್ತು ಎಂದು ಹೇಳಲಾಗಿದೆ. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಡಳಿತ ಮೂಲಗಳಿಂದ ತಿಳಿದು ಬಂದಿದೆ.

ಪ್ರಮುಖ ಅಂಶಗಳು :

ದ.ಕ ಜಿಲ್ಲೆಯಲ್ಲಿ ಮಾರಕ ಕೊರೋನಾಗೆ ಮತ್ತೊಂದು ಬಲಿ

ಬಂಟ್ವಾಳ ತಾಲೂಕಿನ ಕಲ್ಲಡ್ಕ ನಿವಾಸಿ 49 ವರ್ಷದ ವ್ಯಕ್ತಿ ಸಾವು

ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ವ್ಯಕ್ತಿ

ಶನಿವಾರ ಮಂಗಳೂರು ಖಾಸಗಿ ಆಸ್ಪತ್ರೆಗೆ ಕಿಡ್ನಿ ಸಮಸ್ಯೆಯ ಚಿಕಿತ್ಸೆಗಾಗಿ ದಾಖಲಾಗಿದ್ದರು

ಕಳೆದ 20 ದಿನಗಳಿಂದ ಮನೆಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದರು

ಕಿಡ್ನಿ, ಟಿ.ಬಿ.ಹಾಗೂ ಲಿವರ್ ನ ಸಮಸ್ಯೆಯದ ಬಳಲುತ್ತಿದ್ದ ರೋಗಿ

ದ.ಕ ಜಿಲ್ಲೆಯಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 18ಕ್ಕೆ ಏರಿಕೆ.

Comments are closed.