ಕುಂದಾಪುರ: ಕುಂದಾಪುರ ಪುರಸಭೆ ವ್ಯಾಪ್ತಿಯ ಚಿಕ್ಕನ್‌ಸಾಲ್ ರಸ್ತೆಯ ಒಂದೇ ಮನೆಯ ಇಬ್ಬರಿಗೆ ಕೊರೋನ ಪಾಸಿಟಿವ್ ಇರುವುದು ಬುಧವಾರ ದೃಢವಾಗಿದೆ.
58 ವರ್ಷದ ಪತಿ ಹಾಗೂ 50 ವರ್ಷದ ಅವರ ಪತ್ನಿಗೆ ಕೋವಿಡ್ ಸೋಂಕು ಇರುವುದು ಪತ್ತೆಯಾಗಿದೆ. ಇವರ ಸಂಬಂಧಿಕರೊಬ್ಬರು ಇತ್ತೀಚೆಗಷ್ಟೇ ಬೆಂಗಳೂರಿನಿಂದ ಬಂದಿದ್ದರು. ಅವರಿಗೆ ಕೋವಿಡ್ ಸೋಂಕು ಇತ್ತು. ಆ ಮನೆಯಲ್ಲಿದ್ದ ನಾಲ್ವರನ್ನು ಕ್ವಾರಂಟೈನ್ ಮಾಡಿ, ಅವರ ಗಂಟಲ ದ್ರವದ ವರದಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಅದರಲ್ಲಿ ದಂಪತಿಯ ವರದಿ ಪಾಸಿಟಿವ್ ಬಂದಿದ್ದು, ಬಾಕಿ ಇಬ್ಬರದು ನೆಗೆಟಿವ್ ಬಂದಿದೆ.
ಸದ್ಯ ಆ ಮನೆಯನ್ನು ಸೀಲ್‌ಡೌನ್ ಮಾಡಲಾಗಿದೆ ಎಂದು ತಿಳಿದುಬಂದಿದೆ.
Comments are closed.