ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಈ ತಿಂಗಳು (ಜುಲೈ) 20ರ ಹೊತ್ತಿಗೆ ಬರಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಟ್ವಿಟ್ಟರ್ ಮೂಲಕ ಸ್ಪಷ್ಟನೆ ನೀಡಿರುವ ಅವರು, ಸೆಕೆಂಡ್ ಪಿಯುಸಿ ಫಲಿತಾಂಶ ಇಂದು ಬರುತ್ತದೆಯೇ ಎಂದು ಹಲವು ವಿದ್ಯಾರ್ಥಿಗಳು ಕರೆ ಮಾಡಿ ನನಗೆ ಕೇಳುತ್ತಿದ್ದಾರೆ. ಆದರೆ ನಾನು ಈಗಾಗಲೇ ಹೇಳಿರುವಂತೆ ಜುಲೈ 20ರ ಹೊತ್ತಿಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ.
ಅನೇಕ ವಿದ್ಯಾರ್ಥಿಗಳು ನನಗೆ ಫೋನ್ ಮಾಡಿ 2 ನೇ PUC ಫಲಿತಾಂಶ ಇಂದು ಬರುತ್ತದೆಯೇ ಎಂದು ಕೇಳುತ್ತಿದ್ದಾರೆ.
ಈಗಾಗಲೇ ತಿಳಿಸಿರುವಂತೆ ಎರಡನೇ ಪಿಯುಸಿ ಫಲಿತಾಂಶ ಜುಲೈ 20 ರ ಸುಮಾರಿಗೆ ಬರಲಿದೆ ಎಂದು ಮತ್ತೊಮ್ಮೆ ಸ್ಪಷ್ಟ ಪಡಿಸುತ್ತಿದ್ದೇನೆ.
— S.Suresh Kumar (@nimmasuresh) July 9, 2020
ಈ ಮೂಲಕವಾಗಿ ವಿದ್ಯಾರ್ಥಿಗಳು ಮತ್ತು ಪೋಷಕರಿಗಿದ್ದ ಫಲಿತಾಂಶ ಪ್ರಕಟ ದಿನಾಂಕದ ಗೊಂದಲ ನಿವಾರಣೆಯಾದಂತಾಗಿದೆ.
Comments are closed.