ಕರಾವಳಿ

ದ.ಕ.ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿಗೆ ಮತ್ತೊಂದು ಬಲಿ: ಬೋಳೂರಿನ 48 ವರ್ಷದ ವ್ಯಕ್ತಿ ಮೃತ್ಯು

Pinterest LinkedIn Tumblr

ಮಂಗಳೂರು, ಜುಲೈ. 09 : ಕೊರೊನಾ ಮಹಾಮಾರಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಮತ್ತೆ ಒಬ್ಬರು ಬಲಿಯಾಗಿದ್ದಾರೆ. ಕೊರೋನ ಪಾಸಿಟಿವ್ ಆಗಿದ್ದ 48 ವರ್ಷದ ವ್ಯಕ್ತಿ ಇಂದು ಮೃತಪಟ್ಟಿದ್ದು, ದ.ಕ.ಜಿಲ್ಲೆಯಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ.

ಕಳೆದ ಕೆಲವು ದಿನಗಳಿಂದ ದ.ಕ. ಜಿಲ್ಲೆಯಲ್ಲಿ ನಿರಂತರವಾಗಿ ಕೊರೋನ ಸೋಂಕಿತರ ಸಾವಿನ ಸಂಖ್ಯೆ ಏರುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೊನಾದಿಂದ ಉಳ್ಳಾಲ, ಪುತ್ತೂರು, ಹಾಗೂ ಭಟ್ಕಳ ಮೂಲದ ಮೂವರು ಮೃತಪಟ್ಟಿದ್ದಾರೆ.

ಇದೀಗ ನಗರದ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 48 ವರ್ಷದ ಬೋಳೂರು ನಿವಾಸಿ ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ. ಈ ಮೂಲಕ ದ.ಕ. ಜಿಲ್ಲೆಯಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ.

Comments are closed.