ಕರಾವಳಿ

ಮಣ್ಣು ಕುಸಿಯುವ ಭೀತಿ : ಚಾರ್ಮಾಡಿ ಘಾಟ್‌ನಲ್ಲಿ ರಾತ್ರಿ ವಾಹನ ಸಂಚಾರ ನಿರ್ಬಂಧ

Pinterest LinkedIn Tumblr

(ಕಡತ ಚಿತ್ರ)

ಮಂಗಳೂರು ಜುಲೈ 10 : ಚಾರ್ಮಾಡಿ ಘಾಟ್ ರಸ್ತೆಯಲ್ಲಿ ರಾತ್ರಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದ್ದು, ಮುಂದಿನ ಆದೇಶದವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಆದೇಶಿಸಿರುತ್ತಾರೆ.

ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಗೆ ಒಳಪಟ್ಟ ರಾಷ್ಟ್ರೀಯ ಹೆದ್ದಾರಿ-73 (ಹಳೆ ರಾ.ಹೆ.234) ಮಂಗಳೂರು-ವಿಲ್ಲುಪುರಂ ರಸ್ತೆಯ ಕಿ.ಮೀ 76 ರಿಂದ 86 ವರೆಗಿನ ಚಾರ್ಮಾಡಿ ಘಾಟ್ ಭಾಗದಲ್ಲಿ ಮಣ್ಣು ಹಸಿಯಾಗಿ ಕುಸಿಯುವ ಸಾಧ್ಯತೆ ಇದ್ದು ರಸ್ತೆಯ ಪಕ್ಕದಲ್ಲಿ ತಡೆಗೋಡೆಗಳು ಇಲ್ಲದೆ, ಮಂಜು ಕವಿದು ಚಾಲಕರಿಗೆ ದಾರಿ ಕಾಣದೆ ಅಪಘಾತಗಳಾಗುವ ಸಾಧ್ಯತೆ ಹೆಚ್ಚಾಗಿರುವ ಕಾರಣದಿಂದ ಚಾರ್ಮಾಡಿ ಘಾಟಿನಲ್ಲಿ ವಾಹನಗಳ ನಿರ್ಬಂಧವು ಅನಿವಾರ್ಯವಾಗಿರುತ್ತದೆ.

ಆದುದರಿಂದ ಜುಲೈ 9 ರಿಂದ ಪ್ರತಿ ದಿನ ಸಂಜೆ 7 ಗಂಟೆಯಿಂದ ಸಂಜೆ 7 ಗಂಟೆವರೆಗೆ ನಿರ್ಬಂಧಿಸಿ ಮುಂದಿನ ಆದೇಶದವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಆದೇಶಿಸಿರುತ್ತಾರೆ.

ಈ ಆದೇಶವು ಮುಂದಿನ ಆದೇಶದವರೆಗೆ ಜಾರಿಯಲ್ಲಿರುತ್ತದೆ. ಅಲ್ಲದೆ ತುರ್ತು ಆರೋಗ್ಯ ಪರಿಸ್ಥಿತಿಯಲ್ಲಿ ಸದ್ರಿ ಮಾರ್ಗದಲ್ಲಿ ಆ್ಯಂಬುಲೆನ್ಸ್‍ಗಳಿಗೆ ಮಾತ್ರ ಈ ಆದೇಶದಿಂದ ವಿನಾಯಿತಿ ನೀಡಲಾಗಿದೆ.

Comments are closed.