ಉಡುಪಿ: ಸಂಬಂಧಿಯಾದ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಆಕೆ ಗರ್ಭವತಿಯಾಗಲು ಕಾರಣನಾದ ಕಾಮುಕನನ್ನು ಉಡುಪಿ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೂಲತಃ ಬೆಳಗಾಂನವನಾದ ಆರೋಪಿ ಪುಂಡಲೀಕ (21) ಬಾಲಕಿ ಮನೆಯಲ್ಲೇ ಇರುತ್ತಿದ್ದ. ಇವರು ವಲಸೆ ಕಾರ್ಮಿಕರು ಎಂದು ತಿಳಿದುಬಂದಿದೆ.
ಉಡುಪಿ ಜಿಲ್ಲೆ ಹಿರಿಯಡಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದು ಆಕೆ ಗರ್ಭಿಣಿಯಾಗಿರುವ ಬಗ್ಗೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಬಂದ ದೂರಿನಂತೆ ಕಾನೂನು ಪರಿವೀಕ್ಷಾಧಿಕಾರಿ ಪ್ರಭಾಕರ ಆಚಾರ್ ಮಹಿಳಾ ಪೋಲಿಸ್ ಠಾಣೆ ಉಡುಪಿಗೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ದೂರು ನೀಡಿದ್ದರು.
ಅದರಂತೆಯೇ ಸರ್ಕಲ್ ಇನ್ಸ್‌ಪೆಕ್ಟರ್ ಸಿ. ಕಿರಣ್ ರವರ ಮಾರ್ಗದರ್ಶನದಲ್ಲಿ ಸಬ್ ಇನ್ಸ್‌ಪೆಕ್ಟರ್ ವೈಲೆಟ್ ಫೆಮಿನಾ ಪ್ರಕರಣ ದಾಖಲಿಸಿಕೊಂಡು ಆರೋಪಿ ಪುಂಡಲೀಕನನ್ನು ಬಂಧಿಸಿದ್ದಾರೆ .
Comments are closed.