ಕರಾವಳಿ

ದ್ವಿತೀಯ ಪಿಯು ಫಲಿತಾಂಶ : ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ ಕ್ಯಾ.ಕಾರ್ಣಿಕ್

Pinterest LinkedIn Tumblr

ಮಂಗಳೂರು : 2019-20ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿ.ಯು.ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದ ಉಡುಪಿ (90.71%) ಹಾಗೂ ದಕ್ಷಿಣ ಕನ್ನಡ ಜಿಲ್ಲೆ (90.71%), ದ್ವಿತೀಯ ಸ್ಥಾನವನ್ನು ಪಡೆದ ಕೊಡಗು ಜಿಲ್ಲೆ(81.53%), ಮೂರನೇ ಸ್ಥಾನವನ್ನು ಪಡೆದ ಉತ್ತರ ಕನ್ನಡ ಜಿಲ್ಲೆ(80.97%) ಹಾಗೂ ನಾಲ್ಕನೇ ಸ್ಥಾನವನ್ನು ಪಡೆದ ಚಿಕ್ಕಮಗಳೂರು ಜಿಲ್ಲೆ(79.11%) ಯ ಎಲ್ಲಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಿಗೆ, ಉಪನ್ಯಾಸಕರಿಗೆ ಹಾಗೂ ಕಠಿಣ ಪರಿಶ್ರಮದ ಮೂಲಕ ಸಾಧನೆಮಾಡಿದ ವಿದ್ಯಾರ್ಥಿಗಳಿಗೆ ವಿಧಾನ ಪರಿಷತ್ ನ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಕೊರೊನಾ ಮಹಾಮಾರಿಯ ಅತಂಕದ ಮಧ್ಯ ನಡೆಸಲಾಗಿರುವ ಈ ಬಾರಿಯ ಪಿ.ಯು.ಸಿ ಪರೀಕ್ಷೆಯು ಯಶಸ್ವಿಯಾಗಿರುತ್ತದೆ. ರಾಜ್ಯಕ್ಕೆ ಮಾದರಿಯಾಗಬಲ್ಲ ಶೈಕ್ಷಣಿಕ ಪರಂಪರೆಯನ್ನು ಹೊಂದಿರುವ ನಾಲ್ಕೂ ಜಿಲ್ಲೆಗಳ ಈ ಸಾಧನೆ ಹಾಗೂ ಶೈಕ್ಷಣಿಕ ಗುಣಮಟ್ಟವನ್ನು ಕಾಯ್ದುಕೊಂಡು ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕಾಗಿ ನೀಡದ ಕೊಡುಗೆಯನ್ನು ಸ್ಮರಿಸುತ್ತಾ ಈ ಯಶಸ್ಸಿಗೆ ಕಾರಣೀಭೂತರಾದ ಇಲಾಖೆಯ ಅಧಿಕಾರಿಗಳ, ಕಾಲೇಜಿನ ಪ್ರಾಂಶುಪಾಲರುಗಳ, ಉಪನ್ಯಾಸಕರುಗಳ ಹಾಗೂ ವಿದ್ಯಾರ್ಥಿಗಳ ಕಠಿಣ ಪರಿಶ್ರಮವನ್ನು ಶ್ಲಾಘಿಸುತ್ತಾ, ಇಲ್ಲಿನ ಉತ್ಕೃಷ್ಠ ಶೈಕ್ಷಣಿಕ ಪರಂಪರೆಯನ್ನು ಮತ್ತೊಮ್ಮೆ ಸಾಬೀತು ಪಡಿಸಿದ ಎಲ್ಲರನ್ನೂ ಈ ಮೂಲಕ ಅಭಿನಂದಿಸುತ್ತೇನೆ ಎಂದು ಅವರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.