ಕರಾವಳಿ

ದ.ಕ.ಜಿಲ್ಲೆಯಲ್ಲಿ ಶುಕ್ರವಾರ ತ್ರಿಶತಕ ದಾಟಿದ ಸೋಂಕಿತರ ಸಂಖ್ಯೆ : ಪಾಸಿಟಿವ್ ಪ್ರಕರಣ 3074ಕ್ಕೆ ಏರಿಕೆ

Pinterest LinkedIn Tumblr

ಮಂಗಳೂರು, ಜುಲೈ.17: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕು ತ್ರಿಶತಕ ದಾಟಿದ್ದು, ಶುಕ್ರವಾರ ದಾಖಲೆಯ ಅತೀ ಹೆಚ್ಚು 311 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗುವ ಮೂಲಕ ಕೊರೋನಾ ಮಹಾಸ್ಫೋಟಗೊಂಡಿದೆ.

ಜಿಲ್ಲೆಯಲ್ಲಿ ಇದುವರೆಗೆ ದೃಢಪಟ್ಟ ಕೊರೊನಾ ಸೋಂಕು ಪ್ರಕರಣಗಳಲ್ಲಿ ಶುಕ್ರವಾರ ಹೆಚ್ಚಿನ ಪ್ರಕರಣಗಳು ದಾಖಲಾಗಿದೆ. ಗುರುವಾರ ಜಿಲ್ಲೆಯಲ್ಲಿ 238 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 2763 ಇತ್ತು. ಆದರೆ ಇಂದು ಒಂದೇ ದಿನ 311 ಮಂದಿಯಲ್ಲಿ ಸೋಂಕು ಪತ್ತೆಯಾಗುವ ಮೂಲಕ ಸೋಕಿತರ ಸಂಖ್ಯೆ ಮೂರು ಸಾವಿರ ದಾಟಿದ್ದು, ಒಟ್ಟು ಸಂಖ್ಯೆ 3074ಕ್ಕೆ ಏರಿಕೆಯಾಗಿದೆ.

ದ.ಕ. ಜಿಲ್ಲೆಯಲ್ಲಿ ಇಂದು ಒಂದೇ ದಿನ ಅತ್ಯಧಿಕ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಕಳೆದ ಎರಡು ವಾರಗಳಿಂದ ಏಕಾಏಕಿ ಸೋಂಕು ಹರಡುವ ಸ್ವರೂಪವೇ ಬದಲಾಗಿಬಿಟ್ಟಿದೆ. ಇಂದಿನ ಪಾಸಿಟಿವ್ ಪ್ರಕರಣದ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3074ಕ್ಕೆ ಏರಿಕೆಯಾಗಿದೆ.

ಸದ್ಯ 1725 ಮಂದಿ ಆಸ್ಪತ್ರೆಗಳಾಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದಂತೆ, ಇಂದು 115 ಮಂದಿ ಗುಣಮುಖ ರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, 1278 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಶುಕ್ರವಾರದ ಪ್ರಮುಖ ಅಂಶಗಳು :

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೂಡ ಕೊರೋನಾ ಮಹಾ ಸ್ಪೋಟ.

ಜಿಲ್ಲೆಯಲ್ಲಿ ಇಂದು ಬರೋಬ್ಬರಿ 311 ಪಾಸಿಟಿವ್ ಪತ್ತೆ.

ದ.ಕ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಅತೀ ಹೆಚ್ಚು ಪಾಸಿಟಿವ್ ಪತ್ತೆ.

ನಿನ್ನೆ 238 ಕೊರೋನಾ ಪಾಸಿಟಿವ್ ಪತ್ತೆಯಾಗಿತ್ತು.

ದಿನೇ ದಿನೇ ಕರಾವಳಿಯಲ್ಲಿ ಹೆಚ್ಚಾಗುತ್ತಿದೆ ಸೋಂಕಿತರ ಸಂಖ್ಯೆ.

ಪ್ರಾಥಮಿಕ ಸಂಪರ್ಕದಿಂದಲೇ ಹಲವರಲ್ಲಿ ಸೋಂಕು ಪತ್ತೆ.

ILI ಮತ್ತು SARI ಪ್ರಕರಣಗಳಲ್ಲೂ ಪಾಸಿಟಿವ್ ಹೆಚ್ಚಳ.

ದ.ಕ ಜಿಲ್ಲೆಯಲ್ಲಿ ಒಬ್ಬರಿಂದ ಒಬ್ಬರಿಗೆ ವೇಗವಾಗಿ ಹರಡುತ್ತಿದೆ ಸೋಂಕು.

Comments are closed.