ಮಂಗಳೂರು, ಜುಲೈ.19: ಕೊರೋನಾ ಸೋಂಕು ಹಿನ್ನೆಲೆಯಲ್ಲಿ ಮಂಗಳೂರಿನ ಇತಿಹಾಸ ಪ್ರಸಿದ್ದ ಕುಡುಪು ದೇಗುಲಕ್ಕೆ ನಾಗರಪಂಚಮಿಯ ದಿನದಂದು ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
ಜುಲೈ.25ರ ಶನಿವಾರ ನಾಗರಪಂಚಮಿ ದಿನ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದ್ದು, ಭಕ್ತಾಧಿಗಳು ಕ್ಷೇತ್ರದ ಆವರಣಕ್ಕೆ ಬರುವಂತಿಲ್ಲ ಎಂದು ಶ್ರೀ ಕ್ಷೇತ್ರದ ಆಡಳಿತ ಮಂಡಳಿಯ ಪ್ರಕಟಣೆ ತಿಳಿಸಿದೆ.
ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಪ್ರತೀ ವರ್ಷ ನಾಗರಪಂಚಮಿ ದಿನ ಲಕ್ಷಾಂತರ ಭಕ್ತರು ಆಗಮಿಸಿ ಪೂಜೆ ಸಲ್ಲಿಸುತ್ತಾರೆ. ಶ್ರೀ ಕ್ಷೇತ್ರದಲ್ಲಿ ಪ್ರತಿ ವರ್ಷ ಆಚರಿಸುವ ನಾಗರಪಂಚಮಿಯು ಈ ಬಾರಿ ಜುಲೈ 25 ರ ಶನಿವಾರದಂದು ನಿಗದಿಯಾಗಿದೆ.
ಈ ಭಾರಿ ಕೊರೋನಾ ಮಾಹಾಮಾರಿ ಹಿನ್ನೆಲೆಯಲ್ಲಿ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಧಿಕ ಸಂಖ್ಯೆಯಲ್ಲು ಆಗಮಿಸುವ ಭಕ್ತಾಧಿಗಳಿಂದ ಸಾಮಾಜಿಕ ಅಂತರವನ್ನು ಕಾಡಪಾಡುವುದು ಕಷ್ಟಕರವಾಗುವುದರಿಂದ ಮುಂಜಾಗ್ರತ ಕ್ರಮವಾಗಿ ನಾಗರ ಪಂಚಮಿ ದಿನವಾದ ಜುಲೈ 25ರಂದು ಭಕ್ತಾದಿಗಳಿಗೆ ಶ್ರೀ ಕ್ಷೇತ್ರಕ್ಕೆ ಭೇಟಿಯನ್ನು ನಿರ್ಬಂಧಿಸಲಾಗಿದೆ.
ಅಂದು ಎಲ್ಲಾ ಭಕ್ತಾಧಿಗಳಿಗೆ ದೇವಾಲಯದ ಆವರಣಕ್ಕೆ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ನಿರ್ಬಂಧ ಹಿನ್ನೆಲೆಯಲ್ಲಿ ಈ ದಿನದಂದು ಯಾವುದೇ ಭಕ್ತಾಭಿಮಾನಿಗಳು ದೇವಾಲಯಕ್ಕೆ ಭೇಡಿ ನೀಡದೆ ಸಹಕರಿಸಬೇಕು.
ನಾಗರ ಪಂಚಮಿಯ ದಿನದಂದು ಸೇವೆಗಳು, ಸೇವಾಪ್ರಸಾದ, ತೀರ್ಥ ಪ್ರಸಾದ ಮತ್ತು ಅನ್ನ ಸಂತರ್ಪಣೆಗಳು ಇರುವುದಿಲ್ಲ. ನಾಗರ ಪಂಚಮಿಯ ಪ್ರಯುಕ್ತ ನಾಗ ತಂಬಿಲ, ಪಂಚಾಮೃತ, ಆಶ್ಲೇಷ ಬಲಿ ಮೊದಲಾದ ಯಾವುದೇ ಸೇವೆಗಳು ಇಲ್ಲ ಎಂದು ಕುಡುಪು ಶ್ರೀ ಅನಂತ ಪದ್ಮನಾಭ ದೇವಳದ ಆಡಳಿತ ಮಂಡಳಿ ಪ್ರಕಟಣೆ ತಿಳಿಸಿದೆ.
Comments are closed.