ಮಂಗಳೂರು, ಜುಲೈ. 22 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಮತ್ತೆ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು, 149 ಮಂದಿಗೆ ಸೋಂಕು ಧೃಢಪಟ್ಟಿದೆ. ಕಳೆದ ಹಲವಾರು ದಿನಗಳಿಂದ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದ ಕೊರೋನಾ ಸೋಂಕಿತರ ಸಂಖ್ಯೆ ಸೋಮವಾರ ಒಮ್ಮೆಲೆ ಕಡಿಮೆಯಾಗಿತ್ತು. ಆದರೆ ಮಂಗಳವಾರ ಮತ್ತೆ ದಿಢೀರ್ ಹೆಚ್ಚಾಗಿದೆ.
ಮಂಗಳವಾರ ರಾಜ್ಯ ಆರೋಗ್ಯ ಮತ್ತು ಕುಟುಂಬ ಇಲಾಖೆ ಪ್ರಕಟಿಸಿದ ಪ್ರಕಟಣೆಯಲ್ಲಿ ದ.ಕ. ಜಿಲ್ಲೆಯಲ್ಲಿ 149 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ವರದಿಯಾಗಿದೆ.
ಜಿಲ್ಲೆಯಲ್ಲಿ ಸೋಮವಾರ ಬರೀ 89 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 3685 ಇತ್ತು. ಆದರೆ ಮಂಗಳವಾರ ಸೋಂಕು ಪೀಡಿತರ ಸಂಖ್ಯೆ ಮತ್ತೆ ಏರಿಕೆಯಾಗಿದ್ದು, 149 ಮಂದಿಯಲ್ಲಿ ಸೋಂಕು ಪತ್ತೆಯಾಗುವ ಮೂಲಕ ಸೋಕಿತರ ಒಟ್ಟು ಸಂಖ್ಯೆ 3834ಕ್ಕೆ ಏರಿಕೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಜಿಲ್ಲೆಯಲ್ಲಿ ಕಳೆದ ಎರಡುಕೆಲವು ದಿನಗಳಿಂದ ಏಕಾಏಕಿ ಸೋಂಕು ಹರಡುವ ಸ್ವರೂಪವೇ ಬದಲಾಗಿಬಿಟ್ಟಿದೆ. ಮಂಗಳವಾರ ದಂದು 127 ಮಂದಿ ಸೋಂಕಿನಿಂದ ಮುಕ್ತರಾಗಿದ್ದು, ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಇಲ್ಲಿಯ ತನಕ ಜಿಲ್ಲೆಯ 1675 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾದಂತಾಗಿದೆ.
ಮಂಗಳವಾರ 5 ಮಂದಿ ಕೊರೋನಾಗೆ ಬಲಿ :
ಇನ್ನು ಮಂಗಳವಾರ ಒಂದೇ ದಿನ ಕೊರೋನಾ ಸೋಂಕಿಗೆ ಬರೋಬ್ಬರಿ 5 ಮಂದಿ ಬಲಿಯಾಗಿದ್ದಾರೆ. ನಾಲ್ವರು ಗಂಡಸರು ಹಾಗೂ ಓರ್ವ ಮಹಿಳೆ ಕೊರೋನಾದಿಂದ ಮೃತಪಟ್ಟಿದ್ದಾರೆ. 51, 63, 65 ಹಾಗೂ 81 ವರ್ಷದ ನಾಲ್ವರು ಪುರುಷರು ಹಾಗೂ 52 ವರ್ಷದ ಮಹಿಳೆಯೋರ್ವರು ಕೊರೋನಾಗೆ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದ.ಕ.ಜಿಲ್ಲೆಯಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 87ಕ್ಕೆ ಏರಿಕೆಯಾಗಿದೆ.
ಮಂಗಳವಾರದ ಪ್ರಮುಖ ಅಂಶಗಳು :
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಕೊರೋನಾ ಸ್ಪೋಟ
ಜಿಲ್ಲೆಯಲ್ಲಿ ಮಂಗಳವಾರ ಬರೋಬ್ಬರಿ 149 ಮಂದಿಗೆ ಕೊರೋನಾ ಪಾಸಿಟಿವ್
ಲಾಕ್ ಡೌನ್ ನಡುವೆಯೂ ಹೆಚ್ಚುತ್ತಿರುವ ಪಾಸಿಟಿವ್ ಕೇಸ್
ಪ್ರಾಥಮಿಕ ಸಂಪರ್ಕದಿಂದಲೇ ಹೆಚ್ಚಿದ ಕೊರೋನಾ ಪಾಸಿಟಿವ್
ದಿನೇ ದಿನೇ ಹೆಚ್ಚುತ್ತಿರುವ ಸಾವಿನ ಸಂಖ್ಯೆ
ಮಂಗಳವಾರ ಒಂದೇ ದಿನ ಬರೋಬ್ಬರಿ 5 ಮಂದಿ ಕೊರೋನಾಗೆ ಬಲಿ
ಜಿಲ್ಲೆಯಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 87ಕ್ಕೆ ಏರಿಕೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಒಂದೇ ದಿನ ಐವರು ಕೊರೋನಾದಿಂದ ಸಾವು
ನಾಲ್ವರು ಗಂಡಸರು ಹಾಗೂ ಓರ್ವ ಮಹಿಳೆ ಕೊರೋನಾಗೆ ಬಲಿ
51, 63, 65 ಹಾಗೂ 81 ವರ್ಷದ ನಾಲ್ವರು ಪುರುಷರು ಬಲಿ
52 ವರ್ಷದ ಮಹಿಳೆಯೋರ್ವರು ಕೊರೋನಾಗೆ ಬಲಿ
ಜಿಲ್ಲೆಯಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 87ಕ್ಕೆ ಏರಿಕೆ
ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಸಾವಿನ ಸಂಖ್ಯೆ.
Comments are closed.