ಕರಾವಳಿ

ದ.ಕ.ಜಿಲ್ಲೆಯಲ್ಲಿ ಐದು ಸಾವಿರ ದಾಟಿದ ಸೋಂಕಿತರ ಸಂಖ್ಯೆ :ಮಂಗಳವಾರ 173 ಪಾಸಿಟಿವ್ ಪತ್ತೆ

Pinterest LinkedIn Tumblr

ಮಂಗಳೂರು, ಜುಲೈ. 29 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ 173 ಮಂದಿಗೆ ಸೋಂಕು ಧೃಢಪಟ್ಟಿದೆ. ಜಿಲ್ಲೆಯಲ್ಲಿ ಕಳೆದ ಹಲವಾರು ದಿನಗಳಿಂದ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ.

ಸೋಮವಾರ ರಾಜ್ಯ ಆರೋಗ್ಯ ಮತ್ತು ಕುಟುಂಬ ಇಲಾಖೆ ಪ್ರಕಟಿಸಿದ ಪ್ರಕಟಣೆಯಲ್ಲಿ ದ.ಕ. ಜಿಲ್ಲೆಯಲ್ಲಿ 173 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ವರದಿಯಾಗಿದೆ.

ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸೋಂಕು ಪೀಡಿತರ ಸಖ್ಯೆ ದಿಢೀರ್ ಏರಿಕೆಯಾಗಿದ್ದು, ಸೋಮವಾರ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 4930 ಇತ್ತು. ಆದರೆ ಇಂದು ಮತ್ತೆ 173 ಮಂದಿಯಲ್ಲಿ ಸೋಂಕು ಪತ್ತೆಯಾಗುವ ಮೂಲಕ ಸೋಕಿತರ ಸಂಖ್ಯೆ ಐದು ಸಾವಿರ ದಾಟಿದ್ದು, ಒಟ್ಟು ಸಂಖ್ಯೆ 5103ಕ್ಕೆ ಏರಿಕೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಏಕಾಏಕಿ ಸೋಂಕು ಹರಡುವ ಸ್ವರೂಪವೇ ಬದಲಾಗಿಬಿಟ್ಟಿದೆ. ಆತಂಕಕಾರಿ ವಿಚಾರವೆಂದರೆ ಸೋಂಕಿನ ಮೂಲವೇ ಪತ್ತೆಯಾಗದವರ ಸಂಖ್ಯೆ (38) ಮತ್ತೆ ಮುಂದುವರಿದಿದೆ.

ಈ ನಡುವೆ 2632 ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದಂತೆ 2338 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಮಂಗಳವಾರದಂದು ಕೂಡ 41 ಮಂದಿ ಗುಣಮುಖರಾಗಿರುವ ವರದಿ ಲಭ್ಯವಾಗಿದೆ. ಈ ನಡುವೆ ಜಿಲ್ಲೆಯಲ್ಲಿ ಮತ್ತೆ ನಾಲ್ವರು ಸೋಂಕಿಗೆ ಬಲಿಯಾಗಿದ್ದಾರೆ.

ಇನ್ನು ಮಂಗಳವಾರ ಪತ್ತೆಯಾದ ಪಾಸಿಟಿವ್ ಪ್ರಕರಣಗಳ ಪೈಕಿ 21 ಮಂದಿಯಲ್ಲಿ ಪ್ರಾಥಮಿಕ ಸಂಪರ್ಕದಿಂದ ಸೋಂಕು ಪತ್ತೆಯಾಗಿದೆ. 91 ಐಎಲ್ ಐ ಪ್ರಕರಣಗಳು, 22 ಸಾರಿ ಪ್ರಕರಣಗಳು ಪತ್ತೆಯಾಗಿವೆ. ಅಂತರಾಷ್ಟ್ರಿಯ ಪ್ರಯಾಣ ಮುಗಿಸಿ ಬಂದ ಒಬ್ಬರಲ್ಲಿ ಸೋಂಕು ಕಂಡುಬಂದಿದೆ. 38 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ.

ಮಂಗಳವಾರದ ಪ್ರಮುಖ ಅಂಶಗಳು :

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಕೂಡಾ ಕೊರೋನಾ ಸ್ಫೋಟ

ಜಿಲ್ಲೆಯಲ್ಲಿ ಮಂಗಳವಾರ 173 ಮಂದಿಗೆ ಕೊರೋನಾ ಪಾಸಿಟಿವ್

ಮಂಗಳವಾರ 4 ಮಂದಿ ಕೊರೋನಾ ಮಹಾಮಾರಿಗೆ ಬಲಿ

ILI ಪ್ರಕರಣದಿಂದ 91 ಮಂದಿಗೆ ಕೊರೋನಾ ಪಾಸಿಟಿವ್

ಸಂಪರ್ಕವೇ ಪತ್ತೆಯಾಗದ 38 ಮಂದಿಗೆ ಕೊರೋನಾ ಪಾಸಿಟಿವ್

SARI ಪ್ರಕರಣದಿಂದ 22 ಮಂದಿಗೆ ಕೊರೋನಾ ಪಾಸಿಟಿವ್

ಪ್ರಾಥಮಿಕ ಸಂಪರ್ಕದಿಂದ 21 ಮಂದಿಗೆ ಕೊರೋನಾ ಪಾಸಿಟಿವ್

ವಿದೇಶದಿಂದ ಬಂದ ಓರ್ವ ವ್ಯಕ್ತಿಗೆ ಕೊರೋನಾ ಪಾಸಿಟಿವ್

ಜಿಲ್ಲೆಯಲ್ಲಿ ನಿಲ್ಲದ ಕೊರೋನಾ ಅಟ್ಟಹಾಸ.

Comments are closed.