ಕುಂದಾಪುರ: ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅವರು ಕುಂದಾಪುರ ಮತ್ತು ಬೈಂದೂರು ಭಾಗದಲ್ಲಿ ಸಂಭವಿಸಿರುವ ಕಡಲಕೊರೆತ ಪ್ರದೇಶಗಳನ್ನು ಮಂಗಳವಾರ ಸಂಜೆ ವೀಕ್ಷಿಸಿದರು. ಕುಂದಾಪುರದ ಕೋಡಿಯಲ್ಲಿ ಸಂಭವಿಸಿರುವ ಕಡಲಕೊರೆತ ಮತ್ತು ಇದಕ್ಕಾಗಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಅತ್ಯಂತ ತುರ್ತಾಗಿ ಸ್ಪಂದಿಸಿ, ಕಡಲ ಕೊರೆತ ತಡೆಗೆ ಕೈಗೊಂಡ ಕ್ರಮಗಳನ್ನು ಸಚಿವ ಬೊಮ್ಮಾಯಿ ಪರಿಶೀಲಿಸಿದರು.
ನಂತರ ಮರವಂತೆ ಮತ್ತು ಕಿರಿಮಂಜೇಶ್ವರದಲ್ಲಿ ಸಂಭವಿಸಿರುವ ಕಡಲಕೊರೆತವನ್ನು ಸಚಿವರು ವೀಕ್ಷಿಸಿದರು. ಅಲ್ಲಿನ ಸ್ಥಳಿಯರು ಸಚಿವರ ಬಳಿ ಸಮಸ್ಯೆಯ ಬಗ್ಗೆ ವಿವರಣೆ ನೀಡಿದರು. ಈ ಕಾರ್ಯಕ್ರಮಗಳಲ್ಲಿ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಬೈಂದೂರು ಶಾಸಕ ಸುಕುಮಾರ ಶೆಟ್ಟಿ, ಕಾರ್ಕಳ ಶಾಸಕ ಸುನೀಲ್ ಕುಮಾರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾಧಿಕಾರಿ ಜಿ.ಜಗದೀಶ್ , ಜಿಲ್ಲಾ ಪಂಚಾಯತ್ ಸಿಇಓ ಪ್ರೀತಿ ಗೆಹ್ಲೋತ್, ಎಸ್ಪಿ ವಿಷ್ಣುವರ್ಧನ್, ಎಎಸ್ಪಿ ಹರಿರಾಂ ಶಂಕರ್ ಮತ್ತಿತರರು ಉಪಸ್ಥಿತರಿದ್ದರು.
Comments are closed.