ಕರಾವಳಿ

ನಾಳೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಮಂಗಳೂರಿಗೆ..

Pinterest LinkedIn Tumblr

ಮಂಗಳೂರು ಆಗಸ್ಟ್ 11 : ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ನಾಳೆ ಆಗಸ್ಟ್ 12ರಂದು ಮಂಗಳೂರಿಗೆ ಭೇಟಿ ನೀಡಲಿರುವರು.

ಆಗಸ್ಟ್ 12 ರಂದು ಬೆಳಿಗ್ಗೆ 10.30 ಗಂಟೆಗೆ ಉಡುಪಿಯಿಂದ ಮಂಗಳೂರಿಗೆ ಆಗಮಿಸಿ, ಮಂಗಳೂರು ಪಾಂಡೇಶ್ವರ ಅಗ್ನಿಶಾಮಕ ಠಾಣೆಯಲ್ಲಿ ಎಸ್.ಡಿ.ಆರ್.ಎಫ್., ಅಗ್ನಿಶಾಮಕ ದಳ ಮತ್ತು ಗೃಹ ರಕ್ಷಕ ದಳದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿರುವರು.

ಮಧ್ಯಾಹ್ನ 1.40 ಗಂಟೆಗೆ ಮಂಗಳೂರಿನಿಂದ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು.

ಈಗಾಗಲೇ ಮಂಗಳವಾರ ಉಡುಪಿ ಜಿಲ್ಲೆಗೆ ಆಗಮಿಸಿರುವ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು, ಕುಂದಾಪುರ ಮತ್ತು ಬೈಂದೂರು ಭಾಗದಲ್ಲಿ ಸಂಭವಿಸಿರುವ ಕಡಲಕೊರೆತ ಪ್ರದೇಶಗಳನ್ನು ಮಂಗಳವಾರ ಸಂಜೆ ವೀಕ್ಷಿಸಿದರು.

ಕುಂದಾಪುರದ ಕೋಡಿಯಲ್ಲಿ ಸಂಭವಿಸಿರುವ ಕಡಲಕೊರೆತ ಮತ್ತು ಇದಕ್ಕಾಗಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಅತ್ಯಂತ ತುರ್ತಾಗಿ ಸ್ಪಂದಿಸಿ, ಕಡಲ ಕೊರೆತ ತಡೆಗೆ ಕೈಗೊಂಡ ಕ್ರಮಗಳನ್ನು ಸಚಿವ ಬೊಮ್ಮಾಯಿ ಪರಿಶೀಲಿಸಿದರು.

ಇದೇ ವೇಳೆ ಹೆಬ್ರಿಯ ತಾಲೂಕು ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬಳಿಕ ಸಚಿವರು ಕಾಪು ತಾಲೂಕಿನ ಪಡುಬಿದ್ರಿಯ ಮಳೆಹಾನಿ ಪ್ರದೇಶ ಹಾಗೂ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Comments are closed.