ಕುಂದಾಪುರ: ಕಾಂಗ್ರೆಸ್ ಮುಂದಾಳುವಾಗಿದ್ದ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ, ಆಲೂರು – ಹರ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಹರ್ಕೂರು ಮಂಜಯ್ಯ ಶೆಟ್ಟಿ ಬೈಂದೂರು ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ ಸಮ್ಮುಖದಲ್ಲಿ ಬುಧವಾರ ಬೆಳಗ್ಗೆ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಪಕ್ಷದ ಶಾಲು ಹಾಗೂ ಧ್ವಜವನ್ನು ನೀಡುವ ಮೂಲಕ ಹರ್ಕೂರು ಮಂಜಯ್ಯ ಶೆಟ್ಟಿಯವರನ್ನು ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಯವರು ಬಿಜೆಪಿಗೆ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಬೈಂದೂರು ಕ್ಷೇತ್ರ ಬಿಜೆಪಿ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಜಿ.ಪಂ.ಸದಸ್ಯರಾದ ರೋಹಿತ್ ಕುಮಾರ್ ಶೆಟ್ಟಿ, ಶಂಕರ ಪೂಜಾರಿ, ಶೋಭಾ ಜಿ. ಪುತ್ರನ್, ತಾ.ಪಂ. ಉಮೇಶ್ ಶೆಟ್ಟಿ ಕಲ್ಗದ್ದೆ ಹಾಗೂ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.
Comments are closed.