ಕರಾವಳಿ

ಕುಂದಾಪುರದ ತಲ್ಲೂರಿನಲ್ಲಿ ಹಿಟ್ & ರನ್: ದ್ವಿಚಕ್ರ ವಾಹನ ಸವಾರ ದಾರುಣ ಸಾವು

Pinterest LinkedIn Tumblr

ಕುಂದಾಪುರ: ಜಿಲ್ಲೆಯ ಕುಂದಾಪುರ ತಾಲೂಕಿನ ತಲ್ಲೂರು ಸಮೀಪದ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಬುಧವಾರ ರಾತ್ರಿ ನಡೆದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿದ್ದಾರೆ‌.

ಕುಂದಾಪುರ ತಾಪಂ. ಕಟ್ಟಡದಲ್ಲಿ ಅಂಗಡಿ ನಡೆಸುತ್ತಿದ್ದ ಬೈಕ್ ಸವಾರ ಹಟ್ಟಿಯಂಗಡಿ ಸೀತಾರಾಮ ಶೆಟ್ಟಿ (55) ಎಂಬವರು ಸ್ಥಳದಲ್ಲಿ ಮೃತಪಟ್ಟಿದ್ದಾರೆ.

ಅಂಗಡಿ ಮುಚ್ಚಿ ಮನೆಗೆ ಹೋಗುತ್ತಿರುವ ಸಂದರ್ಭ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ.

ಮೃತರು ಪತ್ನಿ ಮತ್ತು ಪುತ್ರಿ ಅಗಲಿದ್ದು ಕುಂದಾಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Comments are closed.