ನವದೆಹಲಿ: ದೇಶದ ಯಾವೆಲ್ಲಾ ಜಿಲ್ಲೆಗಳಲ್ಲಿ ಕೊರೊನಾ ಅಪಾಯಕಾರಿ ಹಂತದಲ್ಲಿದೆ ಎಂಬುವುದನ್ನು ಪತ್ತೆ ಹಚ್ಚಿರುವ ಕೇಂದ್ರ ಆರೋಗ್ಯ ಇಲಾಖೆ ಈ ಪ್ರದೇಶಗಳಲ್ಲಿ ಟೆಸ್ಟಿಂಗ್, ಟ್ರೇಸಿಂಗ್, ಟ್ರೀಟ್ ಮೆಂಟ್ ವಿಚಾರದಲ್ಲಿ ಆಗಿರುವ ತಪ್ಪುಗಳನ್ನು ತಿದ್ದಲು ನಿರ್ಧರಿಸಿದೆ.
ಈಗಾಗಲೇ ಕೇಂದ್ರ ಸರ್ಕಾರವು ಕೊರೊನಾ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಹಾಟ್‍ಸ್ಪಾಟ್ ಜಿಲ್ಲೆಗಳ ಮೇಲೆ ನೇರ ನಿಗಾಯಿಡಲು ಮುಂದಾಗಿದ್ದು, ಈ ಸಂಬಂಧ ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶದ 17 ಹಾಟ್‍ಸ್ಪಾಟ್ ಜಿಲ್ಲೆಗಳ ಮುಖ್ಯ ಆರೋಗ್ಯ ಅಧಿಕಾರಿಗಳ ಜೊತೆಗೆ ಕೇಂದ್ರ ಆರೋಗ್ಯ ಇಲಾಖೆ ಅಧಿಕಾರಗಳು ಸಭೆ ನಡೆಸಿದ್ದಾರೆ.
ಈ 17 ಜಿಲ್ಲೆಗಳಲ್ಲಿ ಕೊಪ್ಪಳ, ಮೈಸೂರು, ದಾವಣಗೆರೆ ಹಾಗೂ ಬಳ್ಳಾರಿ ಜಿಲ್ಲೆಗಳು ಒಳಗೊಂಡಿದೆ. ಆಯಾ ಜಿಲ್ಲೆಯ ಮುಖ್ಯ ಆರೋಗ್ಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿ ಕೊರೊನಾ ಸೋಂಕು ತಡೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಣೆ ನೀಡಿದ್ದಾರೆ. ಭಾರತದ ಒಟ್ಟು ಸೋಂಕಿತರ ಸಂಖ್ಯೆ ಪೈಕಿ 17 ಜಿಲ್ಲೆಗಳಿಂದ ಶೇ.46ರಷ್ಟು ಸೋಂಕಿತರಿದ್ದು, ಈ ಜಿಲ್ಲೆಗಳನ್ನು ಗಂಭೀರವಾಗಿ ಪರಿಗಣಿಸಲಾಗಿದೆ.
Comments are closed.