ಬೆಂಗಳೂರು: ರಾಜ್ಯದ ಉನ್ನತ ಶಿಕ್ಷಣ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ.
ಡಿಸಿಎಂ ಅಶ್ವತ್ಥನಾರಾಯಣ ಅವರೇ ಈ ಬಗ್ಗೆ ಟ್ವೀಟ್ ಮಾಡುವ ಮೂಲಕ ಖಚಿತ ಪಡಿಸಿದ್ದಾರೆ.
In anticipation of the upcoming Assembly sessions, I underwent a #COVID19 test on Saturday and my results have returned positive. I am asymptomatic and will be under home isolation.
I request those who have come in contact with me to take the necessary precautions.
— Dr. Ashwathnarayan C. N. (@drashwathcn) September 19, 2020
ವಿಧಾನಮಂಡಲದ ಅಧಿವೇಶನ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ನಾನು ಈ ಶನಿವಾರ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದ ವೇಳೆ ಸೋಂಕು ದೃಢಪಟ್ಟಿದೆ. ಯಾವುದೇ ರೀತಿಯ ರೋಗ ಲಕ್ಷಣಗಳು ಇಲ್ಲ. ನಾನು ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ.
1/2
— Dr. Ashwathnarayan C. N. (@drashwathcn) September 19, 2020
ಸೆ.21 ಸೋಮವಾರದಿಂದ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ನಾನು ಈ ಶನಿವಾರ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದ ವೇಳೆ ಸೋಂಕು ದೃಢಪಟ್ಟಿದೆ. ಯಾವುದೇ ರೀತಿಯ ರೋಗ ಲಕ್ಷಣಗಳು ಇಲ್ಲ. ನಾನು ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ. ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದವರು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೋರುತ್ತೇನೆ ಎಂದಿದ್ದಾರೆ.
ಸೋಮವಾರದಿಂದ ವಿಧಾನಮಂಡಲ ಅಧಿವೇಶನಗಳು ಆರಂಭವಾಗಲಿದೆ. ಈ ಹಿನ್ನಲೆಯಲ್ಲಿ ಇಂದು ಎಲ್ಲಾ ಶಾಸಕರಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದೆ.
Comments are closed.