ಉಡುಪಿ: ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ 4 ರಂತೆ ಕುಂದಾಪುರ ತಾಲೂಕು ಹೊಸಾಡು ಗ್ರಾಮ ಪಂಚಾಯತ್ ವ್ಯಾಪ್ತಿಗೆ ಸೇನಾಪುರ ಗ್ರಾಮವನ್ನು ಸೇರ್ಪಡೆಗೊಳಿಸಿ ಅಧಿಸೂಚನೆ ಹೊರಡಿಸಲಾಗಿದೆ.
ಅಧಿಸೂಚನೆಯ ಕುರಿತು ಸಾರ್ವಜನಿಕರು ಮೇಲ್ಮನವಿ ಸಲ್ಲಿಸುವುದಾದಲ್ಲಿ ಪ್ರಾದೇಶಿಕ ಆಯುಕ್ತರು, ಮೈಸೂರು ಇವರಿಗೆ ಅಧಿಸೂಚನೆ ಪ್ರಕಟಿಸಿದ 30 ದಿನಗಳ ಒಳಗೆ ಮೇಲ್ಮನವಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರತ್ಯೇಕ ಗ್ರಾ.ಪಂ. ಆಗ್ರಹ..!
ಬೈಂದೂರು ತಾಲೂಕಿಗೆ ಸೇರಿದ ನಾಡ ಗ್ರಾಮಪಂಚಾಯತಿಯಿಂದ ಪ್ರತ್ಯೇಕಗೊಂಡ ಸೇನಾಪುರ ಗ್ರಾಮವನ್ನು ಹೊಸಾಡು ಗ್ರಾಮಪಂಚಾಯತಿಗೆ ಸೇರಿಸಲು ಸೇನಾಪುರ ಗ್ರಾಮದವರ ವಿರೋಧವಿತ್ತು. ಪ್ರಸಿದ್ಧ ದೇವಸ್ಥಾನ, ರೈಲು ನಿಲ್ದಾಣ, ಬ್ಯಾಂಕ್ ಮೊದಲಾದ ಕಚೇರಿಗಳಿದ್ದು ಸೇನಾಪುರದಿಂದ ಹೊಸಾಡಿಗೆ ತೆರಳುವುದು ಕೊಂಕಣ ಸುತ್ತಿ ಮೈಲಾರಕ್ಕೆ ಹೋದಂತೆ ಎಂಬುದು ಜನರ ಅಭಿಪ್ರಾಯವಾಗಿತ್ತು. ಅಲ್ಲದೇ ಸೇನಾಪುರವನ್ನೇ ಪ್ರತ್ಯೇಕ ಗ್ರಾಮಪಂಚಾಯತ್ ಮಾಡಬೇಕೆಂಬ ಕೂಗು ಕೂಡ ಕೇಳಿಬಂದಿತ್ತು.
Comments are closed.