ಮಂಗಳೂರು, ಅಕ್ಟೋಬರ್.05: ಮಾದಕ ವಸ್ತು ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾರ್ಯಾಚರಣೆ ಕೈಗೊಂಡಿದ್ದ ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಶಿವಪ್ರಕಾಶ್ ರಾಜೇಂದ್ರ ನಾಯಕ್ ಅವರ ಧಿಢೀರ್ ವರ್ಗಾವಣೆ ಸುಖಾಂತ್ಯ ಖಂಡಿದೆ.
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳನ್ನು ವಿಚಾರಣೆ ನಡೆಸುತ್ತಿದ್ದ ಸಂದರ್ಭದಲ್ಲೇ ಈ ಪ್ರಕರಣದ ತನಿಖಾಧಿಕಾರಿಯಾಗಿದ್ದ ಸಿಸಿಬಿ ಇನ್ಸ್ ಪೆಕ್ಟರ್ ಶಿವಪ್ರಕಾಶ್ ಅವರನ್ನು ದಿಢೀರನೆ ವರ್ಗಾವಣೆ ಮಾಡಲಾಗಿತ್ತು. ಅವರ ಈ ಸ್ಥಾನಕ್ಕೆ ಕಾಪು ಇನ್‌ಸ್ಪೆಕ್ಟರ್ ಮಹೇಶ್ ಪ್ರಸಾದ್ ಅವರನ್ನು ನೇಮಕ ಮಾಡಿ ಅದೇಶ ಹೊರಡಿಸಲಾಗಿತ್ತು.
ಆದರೆ ಧಿಢೀರ್ ವರ್ಗಾವಣೆ ಬಗ್ಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆ ಆರಂಭವಾಗಿರುವ ಬೆನ್ನಲ್ಲೇ ಇದೀಗ ಸಿಸಿಬಿ ಇನ್‌ಸ್ಪೆಕ್ಟರ್ ಶಿವಪ್ರಕಾಶ್ ನಾಯ್ಕ್ ಅವರ ವರ್ಗಾವಣೆ ರದ್ದುಗೊಳಿಸಿ ಅದೇ ಸ್ಥಾನದಲ್ಲಿ ಮುಂದುವರಿಸಲಾಗಿದೆ.
ಡ್ರಗ್ಸ್ ದಂಧೆಯನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಮಂಗಳೂರಿನ ಸಿಸಿಬಿ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸುತ್ತಿದ್ದು, ಮಾದಕ ವಸ್ತು ಸೇವನೆ ಹಾಗೂ ಮಾರಾಟ ಪ್ರಕರಣದ ಹಲವು ಅರೋಪಿಗಳನ್ನು ಬಂಧಿಸುವಲ್ಲಿಯೂ ಯಶಸ್ವಿಯಾಗಿದ್ದಾರೆ.
ಆದರೆ, ಈ ಪ್ರಕರಣದ ತನಿಖಾಧಿಕಾರಿಯಾಗಿದ್ದ ಸಿಸಿಬಿ ಇನ್ಸ್ ಪೆಕ್ಟರ್ ಶಿವಪ್ರಕಾಶ್ ರಾಜೇಂದ್ರ ನಾಯಕ್ ಅವರನ್ನು ಧಿಢೀರ್ ವರ್ಗಾವಣೆ ಮಾಡಲಾಗಿತ್ತು. ಇದು ಸಾರ್ವಜನಿಕ ವಲಯದಲ್ಲಿ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು.
ಕರಾವಳಿಯಲ್ಲೂ ಡ್ರಗ್ಸ್ ನ ಕೆಲವೊಂದು ಕೈಗಳಿದ್ದು ಇದರ ವಿರುದ್ಧ ಸಂಪೂರ್ಣ ಸಮರ ಸಾರಲು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಡ್ರಗ್ಸ್ ಮಟ್ಟ ಹಾಕುವ ನಿಟ್ಟಿನಲ್ಲಿ ಪೊಲೀಸರಿಂದ ಶತಾಯಗತಾಯ ಪ್ರಯತ್ನಗಳು ನಡೆಯುತ್ತಿವೆ. ಡ್ರಗ್ಸ್ ಜಾಲದ ವಿರುದ್ಧ ಶಿವಪ್ರಕಾಶ್ ರಾಜೇಂದ್ರ ನಾಯಕ್ ಸಮರ ಸಾರಿದ್ದರು. ಇವರ ನೇತೃತ್ವದಲ್ಲಿ ತನಿಖೆ ಮುಂದುವರೆಸಲಾಗಿತ್ತು
ಹೀಗಿರುವಾಗಲೇ, ಪ್ರಕರಣದ ತನಿಖಾಧಿಕಾರಿಯಾಗಿದ್ದ ಸಿಸಿಬಿ ಇನ್ಸ್‌ಪೆಕ್ಟರ್ ಆಗಿದ್ದ ಶಿವಪ್ರಕಾಶ್ ರಾಜೇಂದ್ರ ನಾಯಕ್ ಅವರನ್ನು ಸಿಸಿಬಿಯಿಂದ ಲೋಕಾಯುಕ್ತಕ್ಕೆ ದಿಢೀರನೆ ವರ್ಗಾವಣೆ ಮಾಡಲಾಗಿತ್ತು. ಡ್ರಗ್ಸ್ ಜಾಲದ ತನಿಖೆ ಪೂರ್ಣಗೊಳ್ಳುವ ಮೊದಲೇ ಶಿವಪ್ರಕಾಶ್ ಅವರ ವರ್ಗಾವಣೆ ಹಿಂದೆ ರಾಜಕೀಯ ಒತ್ತಡದ ಆರೋಪ ಕೇಳಿಬಂದಿತ್ತು.
ಡ್ರಗ್ಸ್ ಪ್ರಕರಣದ ವಿಚಾರಣೆ ಮುಂದುವರೆಯುತ್ತಿದ್ದು, ಪ್ರಮುಖ ಆರೋಪಿಗಳನ್ನು ವಿಚಾರಣೆ ನಡೆಸುತ್ತಿದ್ದ ಸಂದರ್ಭದಲ್ಲೇ ಶಿವಪ್ರಕಾಶ್ ಅವರನ್ನು ದಿಢೀರನೆ ವರ್ಗಾವಣೆ ಮಾಡಿರುವುದೇಕೆ?. ಪಾರದರ್ಶಕ ತನಿಖೆ ನಡೆಸುತ್ತಿದ್ದ ಅಧಿಕಾರಿಯ ವರ್ಗಾವಣೆಗೆ ನಾಗರಿಕ ಸಮಾಜ ಆಕ್ರೋಶ ವ್ಯಕ್ತಪಡಿಸಿತ್ತು.
ವಿವಿಧ ಆಯಾಮಗಳಲ್ಲಿ ಮಾಹಿತಿ ಸಂಗ್ರಹಿಸಿ ಡ್ರಗ್ಸ್ ಜಾಲದಲ್ಲಿ ಭಾಗಿಯಾಗಿದ್ದ ಮತ್ತಷ್ಟು ವ್ಯಕ್ತಿಗಳ ಬಂಡವಾಳ ಬಹುರಂಗ ಪಡಿಸುವ ನಿಟ್ಟಿನಲ್ಲಿ ಇವರು ಕಾರ್ಯಪ್ರವೃತ್ತರಾಗಿದ್ದರು. ಆದರೆ, ಅವರ ಸ್ಥಾನಕ್ಕೆ ಹೊಸ ಅಧಿಕಾರಿಯನ್ನೇನೋ ನೇಮಕ ಮಾಡಲಾಗಿದೆ. ಆದರೆ ಹೊಸ ಅಧಿಕಾರಿ ಹೊಸದಾಗಿ ಅಧ್ಯಯನ ನಡೆಸಿ ತನಿಖೆಗೆ ಇಳಿಯುವ ಸಂದರ್ಭ ಸಾಕ್ಷ್ಯ ನಾಶದ ಸಾಧ್ಯತೆಗಳಿವೆ. ಜೊತೆಗೆ ಶಿವಪ್ರಕಾಶ್ ಅವರು ನಡೆಸಿದ ಶ್ರಮ ವ್ಯರ್ಥವಾಗುವುದಿಲ್ಲವೇ ಎನ್ನುವ ಅನುಮಾನ ಕೂಡ ವ್ಯಕ್ತವಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯ ಹಾದಿ ತಪ್ಪಬಹುದೇ ಎಂಬ ಆತಂಕ ಸಾರ್ವಜನಿಕರಲ್ಲಿ ಮೂಡಿತ್ತು.
ಆದರೆ, ಇದೀಗ ಈ ವರ್ಗಾವಣೆಯನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕರು ರದ್ದುಗೊಳಿಸಿದ್ದಾರೆ. ಮಹೇಶ್ ಪ್ರಸಾದ್ ಅವರು ಕಾಪುವಿನಲ್ಲೇ ಮುಂದುವರಿಯಲಿದ್ದಾರೆ ಎಂದು ಪೊಲೀಸ್ ಉನ್ನತ ಮೂಲಗಳು ಖಚಿತಪಡಿಸಿವೆ. ಈ ಮೂಲಕ ವರ್ಗಾವಣೆ ಪ್ರಕರಣ ಸುಖಾಂತ್ಯ ಖಂಡಿದೆ.
ಸಿಸಿಬಿ ಇನ್‌ಸ್ಪೆಕ್ಟರ್ ಶಿವಪ್ರಕಾಶ್ ನಾಯ್ಕ್ ಅವರು ಮರು ನೇಮಕಗೊಂಡಿರುವುದರಿಂದ ಮಾದಕ ವಸ್ತು ಪ್ರಕರಣಕ್ಕೆ ಸಂಬಂಧಪಟ್ಟ ತನಿಖೆಗೆ ಮತ್ತಷ್ಟು ವೇಗ ಸಿಗ ಬಹುದು ಎಂಬ ಅಭಿಪ್ರಾಯ ಕೇಳಿ ಬಂದಿದೆ.
Comments are closed.