ನವದೆಹಲಿ: ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಇಂದು (ಗುರುವಾರ) ಆಸ್ಪತ್ರೆಯಲ್ಲಿ ನಿಧನರಾಗಿದ್ದು ಅವರಿಗೆ 74 ವರ್ಷ ವಯಸ್ಸಾಗಿತ್ತು.
ಕಳೆದ ಕೆಲವು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾದ ಅವರಿಗೆ ಹೃದಯ ಶಸ್ತ್ರಚಿಕಿತ್ಸೆ ನಡೆದಿದ್ದು ಆಸ್ಪತ್ರೆಯಲ್ಲಿದ್ದ ಅವರು ಮೃತಪಟ್ಟಿದ್ದಾರೆ ಎಂದು ಪಾಸ್ವಾನ್ ಪುತ್ರ ಚಿರಾಗ್ ಮಾಹಿತಿ ನೀಡಿದ್ದಾರೆ.
पापा….अब आप इस दुनिया में नहीं हैं लेकिन मुझे पता है आप जहां भी हैं हमेशा मेरे साथ हैं।
Miss you Papa… pic.twitter.com/Qc9wF6Jl6Z— युवा बिहारी चिराग पासवान (@iChiragPaswan) October 8, 2020
ಲೋಕ್ ಜನಶಕ್ತಿ ಪಾರ್ಟಿ(ಎಲ್‌ಜೆಪಿ) ಸಂಸ್ಥಾಪಕ, ದಲಿತ ನಾಯಕ ರಾಮ್ ವಿಲಾಸ್ ಪಾಸ್ವಾನ್ ಅವರು 5 ದಶಕಗಳಿಂದ ರಾಜಕೀಯದಲ್ಲಿ ಸಕ್ರೀಯರಾಗಿದ್ದರು. ಎನ್.ಡಿ.ಎ ಮೈತ್ರಿಕೂಟದಲ್ಲಿದ್ದ ಎಲ್ ಜೆಪಿ ಪಕ್ಷದಿಂದ ಪಾಸ್ವಾನ್ ಅವರು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಈ ಬಗ್ಗೆ ಟ್ಟೀಟ್ ಮಾಡಿರುವ ರಾಮ್ ವಿಲಾಸ್ ಪಾಸ್ವಾನ್ ಪುತ್ರ ಚಿರಾಗ್ ಪಾಸ್ವಾನ್, ‘ಅಪ್ಪಾ, ನೀವು ಈಗ ಜಗತ್ತಿನಲ್ಲಿ ಇಲ್ಲ. ಆದರೆ ನೀವು ಎಲ್ಲೇ ಇರಿ, ನೀವು ಯಾವತ್ತೂ ನನ್ನೊಂದಿಗೆ ಇರುತ್ತೀರಿ. ಮಿಸ್ ಯೂ ಪಪ್ಪಾ’ ಎಂದಿದ್ದಾರೆ.
ಕೇಂದ್ರ ಗ್ರಾಹಕರ ವ್ಯವಹಾರಗಳು, ಆಹಾರ, ಸಾರ್ವಜನಿಕ ವಿತರಣೆ ಸಚಿವ ಶ್ರೀ ರಾಮ್ ವಿಲಾಸ್ ಪಾಸ್ವಾನ್ ನಿಧನಕ್ಕೆ ಮುಖ್ಯಮಂತ್ರಿ @BSYBJP ರವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
5 ದಶಕಗಳಿಂದ ರಾಜಕೀಯದಲ್ಲಿ ಸಕ್ರಿಯರಾಗಿ, ಲೋಕ್ ಜನಶಕ್ತಿ ಪಾರ್ಟಿ ಮುಖ್ಯಸ್ಥರಾಗಿದ್ದರು. ದೇಶದ ಪ್ರಮುಖ ದಲಿತ ನಾಯಕರಾಗಿ, ಶೋಷಿತರ ಶಕ್ತಿಯಾಗಿದ್ದರು. (1/2)
— CM of Karnataka (@CMofKarnataka) October 8, 2020
ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾದ ಶ್ರೀ ರಾಮ್ ವಿಲಾಸ್ ಪಾಸ್ವಾನ್ ಅವರು ನಿಧನರಾಗಿದ್ದು ತೀರ್ವ ವಿಷಾದನೀಯ ಸಂಗತಿ. ದೇವರು ಅವರ ಆತ್ಮಕ್ಕೆ ಶಾಂತಿ ಹಾಗೂ ಈ ನೋವನ್ನು ಭರಿಸುವ ಶಕ್ತಿ ಅವರ ಕುಟುಂಬಕ್ಕೆ ಹಾಗೂ ಅವರ ಅಪಾರ ಅಭಿಮಾನಿಗಳಿಗೆ ನೀಡಲಿಯೆಂದು ಪ್ರಾರ್ಥಿಸುತ್ತೇನೆ.#RamVilasPaswan #OmShanti pic.twitter.com/dcjtBiX1g8
— Basavaraj S Bommai (@BSBommai) October 8, 2020
ಎಂಟು ಬಾರಿ ಲೋಕಸಭಾ ಸದಸ್ಯರಾಗಿ, ಪ್ರಸ್ತುತ ರಾಜ್ಯಸಭಾ ಸದಸ್ಯರಾಗಿ ಕೇಂದ್ರ ಸಚಿವರಾಗಿದ್ದ,
ಲೋಕ ಜನಶಕ್ತಿ ಪಕ್ಷದ ಸಂಸ್ಥಾಪಕರಾದ ರಾಮ್ ವಿಲಾಸ್ ಪಾಸ್ವಾನ್ ಅವರ ನಿಧನ ಆಘಾತಕಾರಿ.
ಸದಾ ದೀನದಲಿತರ ಪರವಾಗಿ ಮಿಡಿಯುತ್ತಿದ್ದ ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ. ಅವರ ಕುಟುಂಬಕ್ಕೆ ನೋವು ಭರಿಸುವ ಶಕ್ತಿ ಲಭಿಸಲಿ.#RamVilasPaswan pic.twitter.com/MtdFjBKLJa
— Karnataka Congress (@INCKarnataka) October 8, 2020
ಇನ್ನು ಕರ್ನಾಟಕ ಸಿಎಂ ಬಿ.ಎಸ್ ಯಡಿಯೂರಪ್ಪ, ಗ್ರಹ ಸಚಿವ ಬಸವರಾಜ್ ಬೊಮ್ಮಾಯಿ ಸಹಿತ ಕೆಪಿಸಿಸಿ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.
Comments are closed.