ಕರಾವಳಿ

ರಾಜ್ಯ ಹಾಗೂ ದುಬೈ ದೇವಾಡಿಗ ಸಂಘದ ಆಶ್ರಯದಲ್ಲಿ ಸಮಾಜದ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

Pinterest LinkedIn Tumblr

ಮಂಗಳೂರು, ಆಕ್ಟೋಬರ್.11: ಕರ್ನಾಟಕ ರಾಜ್ಯ ದೇವಾಡಿಗ ಸಂಘ (ರಿ) ಮಂಗಳೂರು ಮತ್ತು ದೇವಾಡಿಗ ಸಂಘ -ದುಬೈ ಇವರ ಸಹಭಾಗಿತ್ವದಲ್ಲಿ ಹಾಗೂ ವಿದ್ಯಾಭಿಮಾನಿಗಳ ನೆರವಿನಿಂದ ಶೈಕ್ಷಣಿಕ ವರ್ಷ 2019-2020ರಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇಖಡ 90ಕ್ಕಿಂತ ಹೆಚ್ಚು ಅಂಕಗಳಿಸಿದ ದೇವಾಡಿಗ ಸಮಾಜದ ಬಡ ವಿದ್ಯಾರ್ಥಿಗಳಿಗೆ ” ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ-2020 ರವಿವಾರ ನಗರದ ಮಣ್ಣಗುಡ್ಡೆಯಲಿರುವ ದೇವಾಡಿಗ ಸಮಾಜಭವನದಲ್ಲಿ ನೆರವೇರಿತು.

ಮುಂಬಾಯಿ ದೇವಾಡಿಗ ಸಂಘದ ಅಧ್ಯಕ್ಷ ಶ್ರೀ ರವಿ ದೇವಾಡಿಗ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕರ್ನಾಟಕ ರಾಜ್ಯ ದೇವಾಡಿಗ ಸಂಘದ ಅಧ್ಯಕ್ಷರಾದ ಡಾ.ದೇವರಾಜ್ ಅವರು ಪ್ರಸ್ತಾವನೆಗೈದರು.

ಕಾರ್ಯಕ್ರಮದಲ್ಲಿ ಸುಮಾರು 100ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು. ದೇವಾಡಿಗ ಸಂಘದ ಕೇಂದ್ರಿಯ ಸಮಿತಿಯ ಎಲ್ಲಾ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ಕೋವಿಡ್ ಸೋಂಕು ಹಿನ್ನೆಲೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಸರ್ಕಾರದ ಮಾರ್ಗಸೂಚಿ ಪ್ರಕಾರ ಸಮಾಜಿಕ ಅಂತರ, ಸ್ಯಾನಿಟೈಸರ್ ಬಳಕ್ಕೆ ಕಡ್ಡಾಯ ಮಾಡಲಾಗಿತ್ತು.

Comments are closed.