ಬೆಂಗಳೂರು: ನಾಳೆಯಿಂದ ರಾಜ್ಯದಲ್ಲಿಂತಿಮ ವರ್ಷದ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್ ತರಗತಿಗಳು ಆರಂಭವಾಗಲಿವೆ. ಭೌತಿಕ ತರಗತಿಗಳಿಗೆ ಹಾಜರಾಗಲು ಇಚ್ಛಿಸದ ವಿದ್ಯಾರ್ಥಿಗಳಿಗೆ ಆನ್ ಲೈನ್ ತರಗತಿಗಳನ್ನು ನಡೆಸಲು ಸಿದ್ದತೆ ಮಾಡಿಕೊಳ್ಳಲಾಗಿದೆ.
(ಸಾಂದರ್ಭಿಕ ಚಿತ್ರ)
ಎಸ್.ಒ.ಪಿ.ನಲ್ಲಿ ಭೌತಿಕ ತರಗತಿಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಪಾಲಕರಿಂದ ಒಪ್ಪಿಗೆ ಪತ್ರ ತರಬೇಕು. ವಿದ್ಯಾರ್ಥಿಗಳು ಕಾಲೇಜಿಗೆ ಹೋಗುವ ಮುನ್ನ ಪತ್ರ ಹಾಗೂ ಕೊರೊನಾ ಪರೀಕ್ಷೆಯ ಫಲಿತಾಂಶದ ಪತ್ರವನ್ನು ತೆಗೆದುಕೊಂಡು ಹೋಗುವುದು ಕಡ್ಡಾಯವಾಗಿದೆ.
ತರಗತಿಗೆ ಹಾಜರಾಗುವ ವಿದ್ಯಾರ್ಥಿಗಳು ಮಾಸ್ಕ್, ಸ್ಯಾನಿಟೈಸರ್ ತೆಗೆದುಕೊಂಡು ಹೋಗಬೇಕು. ನೀರು, ಊಟ ಮನೆಯಿಂದಲೇ ತರಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಯಾವುದೇ ವಿದ್ಯಾರ್ಥಿಗಳಿಗೆ ಕಾಲೇಜಿಗೆ ಬರಲು ಒತ್ತಡ ಹೇರಿಲ್ಲ.
Comments are closed.