ಕರಾವಳಿ

ಮರಾಠ ಅಭಿವೃದ್ಧಿ ಪ್ರಾಧಿಕಾರ ವಿರೋಧಿಸಿ ಡಿ.5ಕ್ಕೆ ಕರ್ನಾಟಕ ಬಂದ್

Pinterest LinkedIn Tumblr

ಬೆಂಗಳೂರು : ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಸ್ಕಿ ಉಪ ಚುನಾವಣೆ ಹಿನ್ನಲೆಯಲ್ಲಿ ರಚಿಸಿದಂತ ಮರಾಠ ಅಭಿವೃದ್ಧಿ ಪ್ರಾಧಿಕಾರಕ್ಕೆ ಇದೀಗ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಮರಾಠ ಅಭಿವೃದ್ಧಿ ನಿಗಮ ರಚನೆ ಖಂಡಿಸಿ ಕನ್ನಡಪರ ಸಂಘಟನೆಗಳು ಡಿಸೆಂಬರ್ 5ರಂದು ಕರ್ನಾಟಕ ಬಂದ್ ನಡೆಸಲು ಒಕ್ಕೊರಲ ನಿರ್ಧಾರ ಕೈಗೊಂಡಿವೆ.

ಮರಾಠ ಅಭಿವೃದ್ಧಿ ಪ್ರಾಧಿಕಾರ ವಿರೋಧಿಸಿ ಕನ್ನಡಪರ ಸಂಘಟನೆಗಳಿಂದ ಸರಣಿ ಹೋರಾಟ ಹಮ್ಮಿಕೊಳ್ಳಲಾಗಿದೆ. ಡಿಸೆಂಬರ್ 5ಕ್ಕೆ ಕರ್ನಾಟಕ ಬಂದ್ ಗೂ ಕರೆ ನೀಡಲಾಗಿದ್ದು, ಡಿಸೆಂಬರ್ 1ಕ್ಕೆ ಸಿಎಂ ನಿವಾಸಕ್ಕೆ ಮುತ್ತಿಗೆಗೆ ಕರೆ ನೀಡಲಾಗಿದೆ.

ರಾಜ್ಯ ಸರ್ಕಾರ ಸ್ಥಾಪಿಸಿದಂತ ಮರಾಠ ಅಭಿವೃದ್ಧಿ ಪ್ರಾಧಿಕಾರಕ್ಕೆ ಕನ್ನಡಪರ ಸಂಘಟನೆಗಳಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಮರಾಠ ಅಭಿವೃದ್ಧಿ ಪ್ರಾಧಿಕಾರಕ್ಕೆ ವಿರೋಧ ವ್ಯಕ್ತಪಡಿಸಿ ಕರ್ನಾಟಕ ಬಂದ್ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವ ನಿಟ್ಟಿನಲ್ಲಿ ಇಂದು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ವಿವಿಧ ಕನ್ನಡಪರ ಸಂಘಟನೆಗಳ ಒಕ್ಕೂಟದ ಮುಖಂಡರು ಪೂರ್ವಭಾವಿ ಸಭೆ ನಡೆಸಿದ್ದು, ಸಭೆಯಲ್ಲಿ ಡಿಸೆಂಬರ್ 5ರಂದು ಕರ್ನಾಟಕ್ ಬಂದ್ ಮಾಡಲು ಒಮ್ಮತದ ತೀರ್ಮಾನ ಕೈಗೊಳ್ಳಲಾಯಿತು.

ನವೆಂಬರ್ 30ರ ಒಳಗಾಗಿ ಮರಾಠ ಅಭಿವೃದ್ಧಿ ಪ್ರಾಧಿಕಾರ ಆದೇಶವನ್ನು ಹಿಂಪಡೆಯದೇ ಇದ್ದರೇ, ಡಿಸೆಂಬರ್ 1ಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಿವಾಸಕ್ಕೆ ಮುತ್ತಿಗೆ ಹಾಕುವುದಾಗಿ ತಿಳಿಸಿವೆ. ಅಲ್ಲದೇ ಡಿಸೆಂಬರ್ 5ರಂದು ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ಕರ್ನಾಟಕ ಬಂದ್ ನಡೆಸುವುದಾಗಿಯೂ ಘೋಷಣೆ ಮಾಡಲಾಗಿದೆ. ಈ ಮೂಲಕ ಮರಾಠ ಅಭಿವೃದ್ಧಿ ಪ್ರಾಧಿಕಾರ ವಿರೋಧಿಸಿ ಕನ್ನಡಪರ ಸಂಘಟನೆಗಳು ಸರಣಿ ಹೋರಾಟ ಹಮ್ಮಿಕೊಂಡಿವೆ.

ಮಾರಾಠ ಪ್ರಾಧಿಕಾರ ರಚನೆ ಆದೇಶವನ್ನು ವಾಪಸ್ ಪಡೆಯುವಂತೆ ಈ ಹಿಂದೆ ಕನ್ನಡಪರ ಸಂಘಟನೆಗಳು ಸರ್ಕಾರಕ್ಕೆ ನ.27ರವರೆಗೆ ಗಡುವು ನೀಡಿದ್ದವು. ಈ ನಡುವೆಯೇ ಇದೀಗ ಡಿ.5ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ.

ಬಂದ್ ದಿನ ಏನಿರಲ್ಲ?… ಏನಿರುತ್ತೆ?. 

ಕರ್ನಾಟಕ ಬಂದ್ ವೇಳೆ ಖಾಸಗಿ ವಾಹನ ಸಂಚಾರ , ಆಟೋ , ಟ್ಯಾಕ್ಸಿ ಸಂಚಾರ ಇರುವುದಿಲ್ಲ ಎಂದು ಹೇಳಲಾಗಿದೆ .ಅದರಂತೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಆಟೋ ಮತ್ತು ಕ್ಯಾಬ್ ವ್ಯವಸ್ಥೆ ಇರುವುದಿಲ್ಲ ಎನ್ನಲಾಗಿದೆ. ಬಾರ್ ಗಳೂ ಸಹ ಬಂದ್ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಬೆಂಗಳೂರಿನಲ್ಲಿ ಬಿಎಂಟಿಸಿ ಹಾಗೂ ಮೆಟ್ರೋ ಸೇವೆಗಳು ಎಂದಿನಂತೆ ಕರ್ತವ್ಯ ನಿರ್ವಹಿಸಲಿವೆ. ಅದರಂತೆ ರಾಜ್ಯಾದ್ಯಂತ ಸಾರಿಗೆ ಬಸ್ ಸಂಚಾರ ಕೂಡ ಇರಲಿದೆ. ಆಸ್ಪತ್ರೆ, ಔಷಧ ಅಂಗಡಿಗಳು ಸೇರಿದಂತೆ ಅಗತ್ಯ ಸೇವೆಗಳು ಇರಲಿವೆ.

 

Comments are closed.