ಹುಬ್ಬಳ್ಳಿ : ಚಿತ್ರನಟಿ, ಮಾಜಿ ಸಚಿವೆ ಉಮಾಶ್ರೀ ಅವರಿಗೆ ಸೇರಿದ್ದು ಎನ್ನಲಾದ ಕಾರು ಅಪಘಾತಕೀಡಾಗಿದ್ದು, ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ-ಹುಬ್ಬಳ್ಳಿ ರಸ್ತೆಯ ಬಂಡಿವಾಡ ಬಳಿ ನಡೆದಿದೆ.
ಗದಗನಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಇನ್ನೋವಾ ಕಾರು ಮತ್ತು ಹುಬ್ಬಳ್ಳಿಯಿಂದ ಗದಗನತ್ತ ಹೊರಟಿದ್ದ ಬಲೆನೋ ಕಾರಿನ ನಡುವೆ ಶುಕ್ರವಾರ ರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಧಾರವಾಡ ಮೂಲದ ಸ್ಮಿತಾ ಕಟ್ಟಿ ಹಾಗೂ ಇನ್ನೋರ್ವ ವ್ಯಕ್ತಿ ಸಾವನ್ನಪ್ಪಿದ್ದು ಅವರ ಮಾಹಿತಿ ತಿಳಿದು ಬಂದಿಲ್ಲ.
ಅಪಘಾತದಲ್ಲಿ ಇಬ್ಬರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು ಕಾರಿನಲ್ಲಿ ಉಮಾಶ್ರೀ ಅವರಿಗೆ ಸೇರಿದ್ದ ದಾಖಲೆಗಳು ಸಿಕ್ಕಿವೆ. ಹೀಗಾಗಿ ಅಪಘಾತಕ್ಕೆ ಒಳಗಾಗಿರುವ ಇನ್ನೋವಾ ಕಾರು ಮಾಜಿ ಸಚಿವೆ ಉಮಾಶ್ರೀಗೆ ಸೇರಿದ್ದು ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Comments are closed.