ಮಂಗಳೂರು ನವೆಂಬರ್ 21 : ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಪ್ರಸ್ತುತ ಸಾಲಿಗೆ “ಇ-ವಾಣಿಜ್ಯ ಸಂಸ್ಥೆಗಳಾದ zomato, Swiggy, Uber ಇತ್ಯಾದಿ ಹಾಗೂ Amazon ಸಂಸ್ಥೆಗಳಲ್ಲಿ ಉದ್ಯೋಗ ಮಾಡುತ್ತಿರುವ ಯುವಕರಿಗೆ ರೂ. 25,000/- ಗಳ ಸಹಾಯಧನ ಹಾಗೂ ಉಳಿಕೆ ಮೊತ್ತ ಬ್ಯಾಂಕ್ ಅಥವಾ ಆರ್ಥಿಕ ಸಂಸ್ಥೆಗಳ ಮೂಲಕ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಹಿಂದುಳಿದ ವರ್ಗಗಳಿಗೆ ಸೇರಿದ ಪ್ರವರ್ಗ-1, ಪ್ರವರ್ಗ 2ಎ, 3ಎ ಮತ್ತು 3ಬಿ ವರ್ಗದ ಅರ್ಹ ಫಲಾನುಭವಿಗಳು www.dbcdc.karnataka.gov.in ನಲ್ಲಿ ಅರ್ಜಿ ಡಿಸೆಂಬರ್ 19 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ನಮೂನೆ ಹೆಚ್ಚಿನ ಮಾಹಿತಿಗಾಗಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿ, ಡಿ.ದೇವರಾಜ ಅರಸು ಭವನ, ರೇಡಿಯೋ ಪಾರ್ಕ್ ಬಳಿ, ಉರ್ವಸ್ಟೋರ್, ಮಂಗಳೂರು ಕಚೇರಿ ದೂ.ಸಂಖ್ಯೆ: 0824-2456544 ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.