ಕರಾವಳಿ

ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ನವೆಂಬರ್ 30ರವರೆಗೆ ಅವಧಿ ವಿಸ್ತರಣೆ

Pinterest LinkedIn Tumblr

ಮಂಗಳೂರು ನವೆಂಬರ್ 20 : ಪ್ರಸಕ್ತ ಸಾಲಿನ ಡಿಪ್ಲೊಮಾ ಪ್ರವೇಶಕ್ಕೆ ಆಫ್-ಲೈನ್ ಮುಖಾಂತರ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ಅವಧಿಯನ್ನು ನವೆಂಬರ್ 30 ರವರೆಗೆ ವಿಸ್ತರಿಸಲಾಗಿದೆ.

ಪ್ರಸ್ತುತ ಸಾಲಿನಲ್ಲಿ 02 ವರ್ಷಗಳ ಐಟಿಐ / ದ್ವಿತೀಯ ಪಿ.ಯು.ಸಿ.(ವಿಜ್ಞಾನ) / ದ್ವಿತೀಯ ಪಿಯುಸಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ 03ನೇ ಸೆಮಿಸ್ಟರ್ 02ನೇ ವರ್ಷ ಡಿಪ್ಲೊಮಾ ಪ್ರವೇಶವನ್ನು ಸಂಸ್ಥೆಯಲ್ಲಿ ಭರ್ತಿಯಾಗದೇ ಖಾಲಿ ಉಳಿದಿರುವ ಸೀಟುಗಳಿಗೆ ಆನ್‍ಲೈನ್ ಮುಖಾಂತರ ಅರ್ಜಿ ಸಲ್ಲಿಸಿ ಸೀಟು ಸಿಗದೆ ಇರುವಂತಹ ವಿದ್ಯಾರ್ಥಿಗಳಿಗೆ ಹಾಗೂ 02 ವರ್ಷಗಳ ಐ.ಟಿ.ಐ./ದ್ವಿತೀಯ ಪಿ.ಯು.ಸಿ.(ವಿಜ್ಞಾನ) / ದ್ವಿತೀಯ ಪಿ.ಯು.ಸಿ. (ತಾಂತ್ರಿಕ ವಿಷಯಗಳು) ಉತ್ತೀರ್ಣ ಹೊಂದಿದ ವಿದ್ಯಾರ್ಥಿಗಳಿಗೆ ಆಫ್-ಲೈನ್ ಮುಖಾಂತರ ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್ 30 ರವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್, ಮಂಗಳೂರು ಕಛೇರಿಯ ದೂರವಾಣಿ ಸಂಖ್ಯೆ: 0824-2211636ನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.