ಕರಾವಳಿ

ಮಂಗಳೂರು ವಿ.ವಿ ಕಾಲೇಜು ವಿದ್ಯಾರ್ಥಿಗಳ ಪ್ರವೇಶಾತಿಗೆ ಅವಧಿ ವಿಸ್ತರಣೆ: ನ.30 ಕೊನೆ ದಿನ.

Pinterest LinkedIn Tumblr

ಮಂಗಳೂರು ನವೆಂಬರ್ 22 : ಪ್ರಸ್ತುತ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಮಂಗಳೂರು ವಿಶ್ವವಿದ್ಯಾನಿಲ ಯದ ಸ್ನಾತಕೋತ್ತರ ವಿಭಾಗ, ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು, ಸಂಧ್ಯಾಕಾಲೇಜು, ಮಂಗಳೂರು, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಾಪ್ಪ ಕಾಲೇಜು, ಮಡಿಕೇರಿ, ಸ್ನಾತಕೋತ್ತರ ಕೇಂದ್ರ ಚಿಕ್ಕ ಅಳುವಾರ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಸಂಯೋಜಿತ ಕಾಲೇಜುಗಳು (ಸರಕಾರಿ ಕೋಟದ ಸೀಟುಗಳಿಗೆ) ಮತ್ತು ಸರಕಾರಿ ಕಾಲೇಜುಗಳು ನಡೆಸಲ್ಪಡುವ ವಿವಿಧ ಸ್ನಾತಕೋತ್ತರ ಡಿಪ್ಲೊಮಾ ಮತ್ತು ಸರ್ಟಿಫಿಕೇಟ್ ಕಾಲೇಜುಗಳ ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನ.

ಅರ್ಜಿ ನಮೂನೆ ಹಾಗು ಹೆಚ್ಚಿನ ಮಾಹಿತಿಗಾಗಿ www.mangaloreuniversity.ac.in ಅಥವಾ ದೂ.ಸಂ:574199 ವನ್ನು ಸಂಪರ್ಕಿಸುವಂತೆ ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.