ದ. ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಉದ್ಯಾವರ ಮಾಧವ ಆಚಾರ್ಯರಿಗೆ ಶ್ರದ್ಧಾಂಜಲಿ
ಮಂಗಳೂರು, ಡಿಸೆಂಬರ್.09: ಸಾಹಿತ್ಯವಲಯದಲ್ಲಿ ತನ್ನದೇ ಛಾಪನ್ನು ಮೂಡಿಸಿರುವುದಲ್ಲದೆ ರಂಗಕಲೆಯ ಆಸಕ್ತಿಯೊಂದಿಗೆ ಉತ್ತಮ ನಿರ್ದೇಶಕನಾಗಿ ಹೊಸ ಪ್ರತಿಭೆಗಳನ್ನು ಬೆಳಕಿಗೆ ತರುವಲ್ಲಿ ಅತ್ಯುತ್ಸಾಹವನ್ನು ತೋರಿದವರು ಉದ್ಯಾವರ ಮಾಧವ ಆಚಾರ್ಯರು ಎಂದು ವಿಧಾನಪರಿಷತ್ತಿನ ಮಾಜಿ ಸದಸ್ಯ ಕ್ಯಾ| ಗಣೇಶ್ ಕಾರ್ಣಿಕ್ ನುಡಿದರು.
ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕಲ್ಕೂರ ಪ್ರತಿಷ್ಠಾನದಿಂದ ಆಯೋಜಿಸಲಾಗಿದ್ದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಅವರು ದಿವಂಗತ ಮಾಧವ ಆಚಾರ್ಯರಿಗೆ ನುಡಿನಮನ ಸಲ್ಲಿಸಿದರು.
ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತ್ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಮಾತನಾಡುತ್ತ ಓರ್ವ ಉತ್ತಮ ಸಾಹಿತ್ಯ ಪ್ರತಿಭಾನ್ವಿತರೂ, ರಂಗಕರ್ಮಿಯೂ ಅಗಿದ್ದ ಮಾಧವಾಚಾರ್ಯರ ಅಗಲಿಕೆ ನಿಜಕ್ಕೂ ತುಂಬಲಾರದ ನಷ್ಟವೆಂದರು.
ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜಾಧ್ಯಕ್ಷ ಹರಿಕೃಷ್ಣ ಪುನರೂರು, ಯಕ್ಷಗಾನ ವಿದ್ವಾಂಸ ಡಾ. ಎಂ. ಪ್ರಭಾಕರ ಜೋಶಿ, ಪ್ರಸಂಗಕರ್ತ ಪೊಳಲಿ ನಿತ್ಯಾನಂದ ಕಾರಂತ, ರಂಗಭೂಮಿ ಕಲಾವಿದ ವಿ.ಜಿ.ಪಾಲ್, ಪ್ರೊ. ಜಿ. ಕೆ. ಭಟ್ ಸೇರಾಜೆ, ಜನಾರ್ದನ ಹಂದೆ ಮೊದಲಾದವರು ಉಪಸ್ಥಿತರಿದ್ದು ಶ್ರದ್ಧಾಂಜಲಿ ಸಲ್ಲಿಸಿದರು.
Comments are closed.