ಕರಾವಳಿ

ರಾಜ್ಯ ಯುವ ಕಾಂಗ್ರೆಸ್ ಸಮಿತಿ ಚುನಾವಣೆ : ಸ್ಪರ್ಧೆಯಿಂದ ಹಿಂದೆ ಸರಿದ ಮಿಥುನ್ ರೈ

Pinterest LinkedIn Tumblr

ಮಂಗಳೂರು : ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಸಮಿತಿಗೆ ನಡೆಯಲಿರುವ ಚುನಾವಣೆಯಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಯಾಗಿ ನಿಂತಿದ್ದ ದಕ್ಷಿಣ ಕನ್ನಡ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಹಿಂದೆ ಸರಿದಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೂಚನೆಯಿಂದ ದಕ್ಷಿಣ ಕನ್ನಡ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಅವರು ಸ್ಪರ್ಧೆಯಿಂದ ಹಿಂದೆ ಸರಿದಿರುವುದಾಗಿ ಅವರು ತಿಳಿಸಿದ್ದಾರೆ..

ಇದೇ ಬರುವ ಜನವರಿ 10,12 ಹಾಗೂ 1 3 ರಂದು ನಡೆಯಲಿರುವ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ದಕ್ಷಿಣ ಕನ್ನಡದಿಂದ ಅಭ್ಯರ್ಥಿಯಾಗಿ ಸ್ಪರ್ಧೆಗೆ ಉಮೇದುವಾರಿಕೆ ಸಲ್ಲಿಸಿದ್ದ ಮಿಥುನ್ ರೈ ಶನಿವಾರ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ.

ಕೆಪಿಸಿಸಿ ಅಧ್ಯಕ್ಷರ ಡಿಕೆ ಶಿವಕುಮಾರ್ ಅವರ ನಿರ್ದೇಶನದಂತೆ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಉಮೇದುವಾರಿಕೆ ಯಿಂದ ಹಿಂದೆ ಸರಿದಿದ್ದೇನೆ. ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಎಲ್ಲರೂ ಸಕ್ರಿಯವಾಗಿ ಭಾಗವಹಿಸಬೇಕು ಎಂದು ತಮ್ಮ ಅಧಿಕೃತ ಫೇಸ್‌ಬುಕ್‌ ಖಾತೆಯಲ್ಲಿ ಮಿಥುನ್ ರೈ ಹೇಳಿಕೊಂಡಿದ್ದಾರೆ.

Comments are closed.