ಮಂಡ್ಯ: ನಟಿ ರಾಧಿಕಾ ಕುಮಾರಸ್ವಾಮಿ ಅವರಿಗೆ ಸಿಸಿಬಿ ನೋಟಿಸ್ ಕೊಟ್ಟ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ‘ ಯಾರ್ರಿ ಅದು? ಅವರ್ಯಾರೆಂದು ನನಗೆ ಗೊತ್ತಿಲ್ಲ…ಎಂದಿದ್ದಾರೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನೇರಳೆಕೆರೆ ಗ್ರಾಮದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಕುಮಾರಸ್ವಾಮಿ ಅವರನ್ನು ಉದ್ದೇಶಿಸಿ ಪತ್ರಕರ್ತರು ಪ್ರಶ್ನಿಸಿದಾಗ ರಾಧಿಕಾ ಕುಮಾರಸ್ವಾಮಿ ಅವರ ಕುರಿತಂತೆ ಈ ರೀತಿ ಪ್ರತಿಕ್ರಿಯೆ ನೀಡಿದರು.
ರಾಧಿಕಾ ಕುಮಾರಸ್ವಾಮಿಗೆ ಸಿಸಿಬಿ ನೋಟಿಸ್ ಕೊಟ್ಟಿದ್ದಾರೆ. ಅದರ ಬಗ್ಗೆ ಏನ್ ಹೇಳ್ತೀರಿ ಎಂದು ಮಾಧ್ಯಮದವರು ಕುಮಾರಸ್ವಾಮಿ ಅವರನ್ನು ಪ್ರಶ್ನಿಸಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿದ ಎಚ್.ಡಿ ಕುಮಾರಸ್ವಾಮಿ ಅವರು, ಅವರ್ಯಾರು ಎಂದೇ ನನಗೆ ಗೊತ್ತಿಲ್ಲ. ಗೊತ್ತಿಲ್ಲದಿದ್ದವರ ಬಗ್ಗೆ ನಾನ್ಯಾಕೆ ತಲೆಕೆಡಿಸಿಕೊಳ್ಳಲಿ ಎಂದು ಉತ್ತರಿಸಲು ನಿರಾಕರಿಸಿದರು.
Comments are closed.