ಕರಾವಳಿ

ಜನವರಿ.30ರಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಮಂಗಳೂರಿಗೆ…

Pinterest LinkedIn Tumblr

ಮಂಗಳೂರು, ಜನವರಿ 29 : ಮಾನ್ಯ ಉಪಮುಖ್ಯಮಂತ್ರಿ, ಸಾರಿಗೆ ಇಲಾಖೆ ಸಚಿವರಾದ ಲಕ್ಷ್ಮಣ ಸಂಗಪ್ಪ ಸವದಿರವರು ಜನವರಿ 30 ಹಾಗೂ 31 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.

ಜನವರಿ 30 ರಂದು ಬೆಳಿಗ್ಗೆ 11.30 ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ, ಮಧ್ಯಾಹ್ನ 12 ಗಂಟೆಗೆ ಮಂಗಳೂರಿನಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 1.30ಕ್ಕೆ ಪಜೀರು ಗ್ರಾಮದ ಕೆ.ಐ.ಎ.ಡಿ.ಬಿ., ಕಂಬ್ಲಪದವು ಹತ್ತಿರ ಸಾರಿಗೆ ಇಲಾಖೆಯ ವತಿಯಿಂದ ನೂತನವಾಗಿ ನಿರ್ಮಿಸಿರುವ ಭಾರಿ ವಾಹನ ಚಾಲನಾ ತರಬೇತಿ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಸಂಜೆ 4.15ಕ್ಕೆ ನಗರದ ಕದ್ರಿ ಸಕ್ರ್ಯೂಟ್ ಹೌಸ್‍ನಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಂಗಳೂರು/ಪುತ್ತೂರು ವಿಭಾಗದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿರುವರು.

7.30ಕ್ಕೆ ಬಂಟ್ವಾಳ ತಾಲೂಕಿನ ಸಿದ್ದಕಟ್ಟೆಯ ಹೊಕ್ಕಾಡಿಗೋಳಿಯಲ್ಲಿ ಕಂಬಳ ಉತ್ಸವ ಸಮಾರಂಭದಲ್ಲಿ ಭಾಗವಹಿಸಲಿರುವರು.

ರಾತ್ರಿ 10ಕ್ಕೆ ಮಂಗಳೂರಿಗೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ. ಜನವರಿ 31 ರಂದು ಬೆಳಿಗ್ಗೆ 9 ಕ್ಕೆ ಮಂಗಳೂರಿನಿಂದ ಉಡುಪಿಗೆ ಪ್ರಯಾಣ ಬೆಳೆಸಲಿದ್ದಾರೆ.

Comments are closed.