ಕರಾವಳಿ

ಜೀವ ಬೆದರಿಕೆ ಹಿನ್ನೆಲೆ: ಮಾಜಿ ಐಪಿಎಸ್​ ಅಧಿಕಾರಿ ಬಿಜೆಪಿ ಮುಖಂಡ ಅಣ್ಣಾಮಲೈ ಅವರಿಗೆ ವೈ ಪ್ಲಸ್​ ಭದ್ರತೆ

Pinterest LinkedIn Tumblr

ಚೆನ್ನೈ : ತಮಿಳುನಾಡು ಬಿಜೆಪಿ ಘಟಕದ ಉಪಾಧ್ಯಕರಾಗಿರುವ ಮಾಜಿ ಐಪಿಎಸ್​ ಅಧಿಕಾರಿ ಅಣ್ಣಾಮಲೈ ಜೀವಕ್ಕೆ ಆಪತ್ತು ಇರುವ ಹಿನ್ನಲೆ ಅವರಿಗೆ ವೈ ಪ್ಲಸ್​ ಭದ್ರತೆಯನ್ನು ಒದಗಿಸಲಾಗಿದೆ.

ಕರ್ನಾಟಕದಲ್ಲಿ ದಿಟ್ಟ ಅಧಿಕಾರಿ ಎಂದು ಹೆಸರು ಮಾಡಿದ್ದ ಮಾಜಿ ಐಪಿಎಸ್​ ಅಧಿಕಾರಿ ಅಣ್ಣಾಮಲೈ, ಪೊಲೀಸ್​​ ವೃತ್ತಿ ಜೀವನಕ್ಕೆ ರಾಜೀನಾಮೆ ನೀಡಿದ ಬಳಿಕ ತಮಿಳುನಾಡು ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ. ಸದ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅವರು ಪ್ರಚಾರದಲ್ಲಿ ಭಾಗಿಯಾಗಿದ್ದಾರೆ.

ಕರ್ನಾಟಕದಲ್ಲಿ ದಿಟ್ಟ ಪೊಲೀಸ್​ ಅಧಿಕಾರಿ ಎಂದು ಹೆಸರು ಪಡೆದು ಕರ್ನಾಟಕದ ಸಿಂಹ ಎಂದೇ ಖ್ಯಾತಿ ಪಡೆದಿರುವ ಅಣ್ಣಾಮಲೈ ಅವರು ರಾಜಕೀಯಕ್ಕೆ ಎಂಟ್ರಿ ಕೊಡುತ್ತಿದ್ದಂತೆಯೇ ಅವರ ಜೀವಕ್ಕೆ ಬೆದರಿಕೆ ಇರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

ಇದೀಗ ಅವರ ಜೀವಕ್ಕೆ ಬೆದರಿಕೆ ಇರುವ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಈ ಕುರಿತು ಸಾಕಷ್ಟು ಕರೆಗಳು ಬಂದ ಬಳಿಕ ಅವರಿಗೆ ಹೆಚ್ಚಿನ ಭದ್ರತೆ ಅವಶ್ಯಕತೆ ಇದೆ ಎಂಬುದನ್ನು ಅರಿತ ತಮಿಳುನಾಡು ಪೊಲೀಸರು ಅವರಿಗೆ ವೈ ಪ್ಲಸ್​ ಭದ್ರತೆ ನೀಡಿದ್ದಾರೆ.

ಕೆಲ ಮಾವೋವಾದಿ ಮತ್ತು ಪಿಎಫ್​ಐ ಗುಂಪುಗಳಿಂದ ಬೆದರಿಕೆ ಬರುತ್ತಿರುವುದಾಗಿ ತಿಳಿದುಬಂದಿದೆ. ವೈ ಪ್ಲಸ್​ ಭದ್ರತೆ ಹಿನ್ನೆಲೆಯಲ್ಲಿ ಸದ್ಯ ಅವರ ಭದ್ರತೆಗೆ 11 ಜನ ಕಮಾಂಡೋಗಳು ಮತ್ತು ಇಬ್ಬರು ಗನ್​ ಮ್ಯಾನ್​ ಇರಲಿದ್ದು, ಅವರ ನಿವಾಸಕ್ಕೆ ಒಬ್ಬರು ಭದ್ರತೆಯನ್ನು ನಿಯೋಜಿಸಲಾಗಿದೆ.

ಕರ್ನಾಟಕದ ಸಿಂಗಂ ಎಂದೇ ಗುರುತಿಸಿ ಕೊಂಡಿದ್ದ ಐಪಿಎಸ್​ ಅಧಿಕಾರಿಯಾಗಿದ್ದ ಅಣ್ಣಾಮಲೈ ನೇರ ದಿಟ್ಟ ಆಡಳಿತದಿಂದ ಜನ ಮನ್ನಣೆ ಪಡೆದಿದ್ದರು. 10 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದ ಬಳಿಕ ಅವರು ಮೇ 2019ರಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಗೊಂಡಿದ್ದರು.

Comments are closed.