ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲ್ಲೂಕಿನ ಹಿರೇನಾಗವೇಲಿ ಗ್ರಾಮದ ಬಳಿ ಜಿಲೆಟಿನ್ ಸ್ಪೋಟಗೊಂಡು, ಆರು ಮಂದಿ ಸಾವನ್ನಪ್ಪಿದ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸೋ ಸಲುವಾಗಿ ಸಿಐಡಿ ತನಿಖೆಗೆ ವಹಿಸಲಾಗುತ್ತಿದೆ ಎಂದು ಗೃಹ, ಕಾನೂನು ಹಾಗೂ ಸಂಸದೀಯ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಜಿಲೆಟಿನ್ ಸ್ಪೋಟ ಸಂಭವಿಸಿದ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯ ಹಿರೇನಾಗವೇಲಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಘಟನಾ ಸ್ಥಳದಲ್ಲಿನ ವಾಸ್ತವ ಪರಿಸ್ಥಿತಿಯನ್ನು ಸಚಿವರು ಖುದ್ದಾಗಿ ಪರಿಶೀಲಿಸಿದರು. ಪೊಲೀಸ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಂದ ಘಟನೆ ಕುರಿತು ಹೆಚ್ಚಿನ ಮಾಹಿತಿ ಪಡೆದರು.
ಬಳಿಕ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು, ಜಿಲೆಟಿನ್ ಸ್ಪೋಟಕ ಪ್ರಕರಣದಲ್ಲಿ ಜೆಲ್ ರೀತಿಯ ಸ್ಪೋಟಕ ವಸ್ತು ಸ್ಪೋಟಗೊಂಡಿದೆ. ಇದರಿಂದಾಗಿ 6 ಜನರು ಸಾವನ್ನಪ್ಪಿದ್ದಾರೆ. ಇಂತಹ ಪ್ರಕರಣ ಕುರಿತಂತೆ ಸಂಪೂರ್ಣವಾಗಿ ತನಿಖೆ ನಡೆಸುವಂತೆ ಸಿಐಡಿ ತನಿಖೆಗೆ ವಹಿಸಲಾಗುತ್ತಿದೆ. ನಾಳೆಯಿಂದಲೇ ಸಿಐಡಿ ಅಧಿಕಾರಿಗಳು ತನಿಖೆ ನಡೆಸುವುದಾಗಿ ಹೇಳಿದರು.
ಆರೋಗ್ಯ ಸಚಿವ ಡಾ.ಸುಧಾಕರ್, ಕೇಂದ್ರ ವಲಯದ ಐಜಿಪಿ ಪ್ರತಾಪ್‍ರೆಡ್ಡಿ, ಜಿಲ್ಲಾಕಾಧಿರಿ ಆರ್.ಲತಾ, ಎಸ್‍ಪಿ ಮಿಥುನ್‍ಕುಮಾರ್ ಸೇರಿದಂತೆ ಹಿರಿಯ ಅಕಾರಿಗಳು ಈ ವೇಳೆ ಹಾಜಾರಿದ್ದರು.
Comments are closed.