ಮಂಗಳೂರು,ಮಾರ್ಚ್.14: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗರೂಕತಾ ಕ್ರಮವಾಗಿ ಎಲ್ಲಾ ಸರಕಾರಿ, ಖಾಸಗಿ/ಅನುದಾನಿತ ಕಾಲೇಜುಗಳಿಗೆ ಮಾ.15ರಿಂದ 30ರವರೆಗೆ 15 ದಿನ ರಜೆ ಘೋಷಿಸಲಾಗಿದೆ. ಎಂದು ಬರೆದಿರುವ ಶಿಕ್ಷಣ ಇಲಾಖೆಗೆ ಸಂಬಂಧಪಟ್ಟ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಈ ಬಗ್ಗೆ ವಿದ್ಯಾರ್ಥಿಗಳು, ಉಪನ್ಯಾಸಕರು, ಪ್ರಾಚಾರ್ಯರಲ್ಲಾದ ಗೊಂದಲವನ್ನು ಗಮನಿಸಿದ ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ‘ಯಾವುದೇ ಕಾಲೇಜುಗಳಿಗೆ ರಜೆ ಸಾರಲಾಗಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.
ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂಬ ಫೇಕ್ ಮೆಸೇಜ್ ಜಲತಾಣಗಳಲ್ಲಿ ಹರಿದಾಡುತ್ತಿದ್ದು, ಇದು ಅಧಿಕೃತವಲ್ಲ. ಇದು ಸುಳ್ಳು ಸುದ್ಧಿಯಾಗಿದೆ. ಯಾವೂದೇ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ ಎಂದು ದ.ಕ.ಜಿಲ್ಲಾಧಿಕಾರಿ ಸ್ಪಷ್ಟಣೆ ನೀಡಿದ್ದಾರೆ.
ಕಾಲೇಜು ಶಿಕ್ಷಣ ಆಯುಕ್ತರ ಕಚೇರಿಯಿಂದ ಕಾಲೇಜು ಶಿಕ್ಷಣ ನಿರ್ದೇಶಕರ ಸಹಿಯೊಂದಿಗೆ ಮಾ.14ರಂದು ಹೊರಡಿಸಲಾಗಿದ್ದು ಎಂದು ಬಿಂಬಿಸುವ ಸುತ್ತೋಲೆಯ ಹೆಸರಿನ ಸಂದೇಶವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿತ್ತು. ಇದು ವಿದ್ಯಾರ್ಥಿಗಳಲ್ಲಿ ಮಾತ್ರವಲ್ಲ ಉಪನ್ಯಾಸಕರು ಹಾಗೂ ಸಾರ್ವಜನಿಕರಲ್ಲಿ ಗೊಂದಲಕ್ಕೆ ಕಾರಣವಾಗಿತ್ತು. ಇದೀಗ ಜಿಲ್ಲಾಧಿಕಾರಿಗಳ ಸ್ಪಷ್ಟಣೆಯೊಂದಿಗೆ ಗೊಂದಲ ನಿವಾರಣೆಯಾಗಿದೆ.
Comments are closed.