ಪ್ರಮುಖ ವರದಿಗಳು

ತಮಿಳುನಾಡು ವಿಧಾನಸಭಾ ಚುನಾವಣೆ: ಅಣ್ಣಾಮಲೈ ಐಪಿಎಸ್, ಖುಷ್ಬೂ ಅವರಿಗೆ ಬಿಜೆಪಿ ಟಿಕೆಟ್

Pinterest LinkedIn Tumblr

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಗಾಗಿ ಬಿಜೆಪಿ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಹಾಗೂ ನಟಿ ಖುಷ್ಬೂ ಸುಂದರ್ ಅವರಿಗೆ ಟಿಕೆಟ್ ಘೋಷಿಸಲಾಗಿದೆ.

ತಮಿಳುನಾಡಿನ 20 ವಿಧಾನಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧಿಸುತ್ತಿದೆ. ಇದೀಗ ಒಟ್ಟೂ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದ್ದು ಈ ಪೈಕಿ ಅಣ್ಣಾಮಲೈ ಹಾಗೂ ಖುಷ್ಬೂ ಹೆಸರಿದ್ದು ಅವರ ಅಭಿಮಾನಿಗಳಲ್ಲೂ ಸಂತಸ ಮೂಡಿದೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ನವದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದರು.

ಅಣ್ಣಾಮಲೈ ಅವರು ಅರವಾಕುರಿಚಿ ಕ್ಷೇತ್ರದಿಂದ ಸ್ಪರ್ಧಿಸಿದರೆ ನಟಿ ಖುಷ್ಬೂ ಥೌಸಂಡ್ ಲೈಟ್ಸ್ ಕ್ಷೇತ್ರದಿಂದಲೂ ಸ್ಪರ್ಧಿಸಲಿದ್ದಾರೆ.

ಇನ್ನೊಂದೆಡೆ ಕಾರೈಕುಡಿ ಕ್ಷೇತ್ರದಿಂದ ಹೆಚ್. ರಾಜಾ ಹಾಗೂ ಧರ್ಮಪುರಂ ಕ್ಷೇತ್ರದಿಂದ ಮುರುಗನ್ ಕಣಕ್ಕಿಳಿಯಲಿದ್ದಾರೆ.

Comments are closed.