ಮಂಗಳೂರು, ಮಾರ್ಚ್.24: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಹಾಗೂ ಇಂಡಿಯನ್ ರೆಡ್ ಕ್ರಾಸ್ ನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಸಹಯೋಗದೊಂದಿಗೆ ನಗರದ ಪತ್ರಿಕಾ ಭವನದಿಂದ ಊರ್ವ ಮಾರುಕಟ್ಟೆಯವರೆಗೆ ಕೊರೋನಾ -19 ವಿರುದ್ಧ ಜಾಗ್ರತಿ ಕಾರ್ಯಕ್ರಮವನ್ನು ಹಮ್ಮಿಕೊ ಳ್ಳಲಾಯಿತು.
ರೆಡ್ ಕ್ರಾಸ್ ಸೊಸೈಟಿ ಯ ಕಾರ್ಯಾಧ್ಯಕ್ಷ ಡಾ.ಶಾಂತರಾಮ ಶೆಟ್ಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಾ,ಕೊರೋನಾ ಸೋಂಕಿನ ಎರಡನೆ ಅಲೆ ಜಿಲ್ಲೆಯನ್ನು ಆವರಿಸುವ ಭೀತಿಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮಗಳನ್ನು ಅಳವಡಿಸಿಕೊಳ್ಳಲು ಹಮ್ಮಿಕೊಂಡಿರುವ ಜನ ಜಾಗ್ರತಿ ಕಾರ್ಯಕ್ರಮಕ್ಕೆ ಎಲ್ಲರ ಸಹಕಾರ ಅಗತ್ಯ.
ಈ ಬಗ್ಗೆ ಜನರಿಗೆ ರೆಡ್ ಕ್ರಾಸ್ ಕೋವಿಡ್ ಸಂದರ್ಭದಲ್ಲಿ ಮುಂಚೂಣಿಯಲ್ಲಿ ನಿಂತು ಸಾಕಷ್ಟು ಮನವರಿಕೆ ಕಾರ್ಯಕ್ರಮಗಳನ್ನು ನಡೆಸಿದೆ.
ಇದೀಗ ಎರಡನೆ ಅಲೆಯ ಸಂದರ್ಭದಲ್ಲಿ ಪತ್ರಕರ್ತರು ಮುನ್ನೆಚ್ಚರಿಕಾ ಕಾರ್ಯಕ್ರಮಗಳಲ್ಲಿ ತಮ್ಮನ್ನು ಜಿಲ್ಲಾಡಳಿತದ ಜೊತೆ ತೊಡಗಿಸಿಕೊಂಡಿರುವುದು ಶ್ಲಾಘನೀಯ ಎಂದು ಶಾಂತರಾಮಶೆಟ್ಟಿ ತಿಳಿಸಿದರು.
ಬಳಿಕ ಪತ್ರಿಕಾ ಭವನದ ಪರಿಸರ ಹಾಗೂ ಊರ್ವ ಮಾರುಕಟ್ಟೆ ಪ್ರದೇಶದಲ್ಲಿ ಕೊರೋನಾ ತಡೆಯ ಬಗ್ಗೆ ಜಾಗ್ರತಿ ಮೂಡಿಸಲಾಯಿತು. ಮಾಸ್ಕ್ ಧಾರಣೆಯ ಬಗ್ಗೆ ಜನರಿಗೆ ಮಾಸ್ಕ ಇಲ್ಲದವರಿಗೆ ಉಚಿತವಾಗಿ ಮಾಸ್ಕ್ ವಿತರಿಸಲಾಯಿತು.
ಜಾಗ್ರತಿ ಕಾರ್ಯಕ್ರಮದಲ್ಲಿ ರೆಡ್ ಕ್ರಾಸ್ ದ.ಕ ಘಟಕದ ಗೌರವ ಕಾರ್ಯದರ್ಶಿ ಪ್ರಭಾಕರ ಶರ್ಮಾ, ದ.ಕ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀ ನಿವಾಸ ನಾಯಕ್ ಇಂದಾಜೆ ,ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್,ಪದಾಧಿಕಾರಿಗಳಾದ ಭಾಸ್ಕರ ರೈ ಕಟ್ಟ,ಆತ್ಮಭೂಷಣ್ ಮೊದಲಾದವರು ಉಪಸ್ಥಿತರಿದ್ದರು.
Comments are closed.