ಮಂಗಳೂರು ಎಪ್ರಿಲ್ 06 : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ. ಎಸ್. ಈಶ್ವರಪ್ಪ ಅವರು ಏಪ್ರಿಲ್ 7 ಮತ್ತು 8 ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸವನ್ನು ಕೈಗೊಳ್ಳಲಿದ್ದಾರೆ.
ಏಪ್ರಿಲ್ 7 ರಂದು ಸಂಜೆ 4.10 ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ. ಸಂಜೆ 5 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಯೋಜನೆ ಮತ್ತು ಕಾರ್ಯಕ್ರಮಗಳ ಪ್ರಗತಿ ಪರಶೀಲನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಏಪ್ರಿಲ್ 8 ರಂದು ಬೆಳಿಗ್ಗೆ 10 ಗಂಟೆಗೆ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ನಂತರ ಸಂಜೆ 4.40 ಕ್ಕೆ ಮಂಗಳೂರಿನಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.
Comments are closed.