ಕರಾವಳಿ

ಸಚಿವ ಕೆ..ಎಸ್ ಈಶ್ವರಪ್ಪರಿಂದ ಮಂಗಳೂರಿನಲ್ಲಿ ಪ್ರಗತಿ ಪರಿಶೀಲನಾ ಸಭೆ

Pinterest LinkedIn Tumblr

ಮಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವರಾದ ಕೆ..ಎಸ್ ಈಶ್ವರಪ್ಪ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆಯು ನಡೆಯಿತು.

ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್. ಅಂಗಾರ, ಜಿ.ಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಪಂಚಾಯತ್‍ರಾಜ್ ಆಯುಕ್ತರಾದ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಜಿ.ಪಂ ಕಾರ್ಯ ನಿರ್ವಾಹಣಾಧಿಕಾರಿ ಡಾ.ಕುಮಾರ್ , ಜಿ.ಪಂ ಉಪಾಧ್ಯಕ್ಷೆ ಕಸ್ತೂರಿ ಪಂಜ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮಿ ಗಟ್ಟಿ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ಮಮತಾ ಶೆಟ್ಟಿ, ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ರವೀಂದ್ರ ಕಂಬಳಿ, ವಿಶೇಷ ಅಧಿಕಾರಿ ಜಯರಾಮ್, ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯ ಮುಖ್ಯ ಅಭಿಯಂತರರು ಎಜಾಜ್ ಹುಸೇನ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Comments are closed.