ಕರಾವಳಿ

ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ ಆರ್. ನಿರಾಣಿ ಅವರು ಇಂದು ಮಂಗಳೂರಿಗೆ..

Pinterest LinkedIn Tumblr

ಮಂಗಳೂರು, ಎಪ್ರಿಲ್ 08 :ಕರ್ನಾಟಕ ಸರ್ಕಾರದ ಗಣಿ ಮತ್ತು ಭೂ ವಿಜ್ಞಾನ ಸಚಿವರಾದ ಮುರುಗೇಶ ಆರ್. ನಿರಾಣಿ ಅವರು ಎಪ್ರಿಲ್ 8 ಮತ್ತು 9 ರಂದು ಜಿಲ್ಲೆಯಲ್ಲಿ ಪ್ರವಾಸವನ್ನು ಕೈಗೊಳ್ಳಲಿದ್ದಾರೆ.

ಎಪ್ರಿಲ್ 8 ರಂದು ಸಂಜೆ 4.15 ಕ್ಕೆ ಮಂಗಳೂರಿಗೆ ಆಗಮಿಸಿ, ಸಂಜೆ 4.30 ಕ್ಕೆ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಗಣಿ ಮತ್ತು ಭೂವಿಜ್ಞಾನ, ಅರಣ್ಯ, ಕಂದಾಯ, ಪೊಲೀಸ್ ಪರಿಸರ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ನಂತರ ಸಂಜೆ 6.30 ಕ್ಕೆ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.

ರಾತ್ರಿ 9 ಗಂಟೆಗೆ ಕಡಬ ತಾಲೂಕಿನ ಖಾಸಗಿ ಕಾರ್ಯಕ್ರಮ (ಧರ್ಮನೇಮೋತ್ಸವ)ದಲ್ಲಿ ಭಾಗವಹಿಸಲಿದ್ದಾರೆ. ನಂತರ ಮಂಗಳೂರಿಗೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ.

ಎಪ್ರಿಲ್ 9 ರಂದು ಬೆಳಿಗ್ಗೆ 11.30 ಕ್ಕೆ ಮಂಗಳೂರಿನಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

Comments are closed.