ಮಂಗಳೂರು : ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಜನ್ಮ ದಿನಾಚರಣೆ ಪ್ರಯುಕ್ತ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಮಂಗಳೂರು ನಗರ ದಕ್ಷಿಣ ಶಾಸಕರಾದ ವೇದವ್ಯಾಸ್ ಕಾಮತ್ ಅವರು ಕುದ್ಮುಲ್ ರಂಗರಾವ್ ಪುರಭವನದ ಮುಂಭಾಗದ ಲ್ಲಿರುವ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆಗೈದು ಗೌರವ ಸಲ್ಲಿಸಿದರು.
ಆ ಬಳಿಕ ಮಾತನಾಡಿದ ನಳಿನ್ ಕುಮಾರ್ ಕಟೀಲ್, ಈ ದೇಶದ ಅಭ್ಯುದಯಕ್ಕೆ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕೊಡುಗೆ ಅಪಾರವಾದದ್ದು. ಅವರ ಚಿಂತನೆಗಳು ಈ ರಾಷ್ಟ್ರಕ್ಕೆ ಭದ್ರ ಅಡಿಪಾಯ ಹಾಕಿಕೊಟ್ಟಿದೆ ಎಂದರು.
ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ, ರಾಜ್ಯ ಮೀನುಗಾರಿಕಾ ನಿಗಮದ ಅದ್ಯಕ್ಷರಾದ ನಿತಿನ್ ಕುಮಾರ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರವಿಶಂಕರ್ ಮಿಜಾರ್, ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಅದ್ಯಕ್ಷರಾದ ವಿಜಯ್ ಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ಸುರೇಂದ್ರ ಜಪ್ಪಿನಮೊಗರು, ರೂಪಾ ಡಿ. ಬಂಗೇರ, ಮಂಡಲ ಎಸ್.ಸಿ ಮೋರ್ಚಾ ಅದ್ಯಕ್ಷರಾದ ರಘುವೀರ್ ಬಾಬುಗುಡ್ಡೆ, ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಸಂಧ್ಯಾ ಮೋಹನ್ ಆಚಾರ್, ಭಾನುಮತಿ, ಶೈಲೇಶ್ ಶೆಟ್ಟಿ, ಗಣೇಶ್ ಕುಲಾಲ್, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ರಮೇಶ್ ಕಂಡೆಟ್ಟು, ಬಿಜೆಪಿ ಮುಖಂಡರಾದ ಸುಧೀರ್ ಶೆಟ್ಟಿ ಕಣ್ಣೂರು, ದೀಪಕ್ ಪೈ, ಕಿರಣ್ ರೈ ಬಜಾಲ್, ಅಜಯ್ ಕುಲಶೇಖರ, ರಮೇಶ್ ಹೆಗ್ಡೆ, ಮೋಹನ್ ಆಚಾರ್, ಲಲ್ಲೇಶ್ ಅತ್ತಾವರ, ಜನಾರ್ದನ ಕುಡ್ವ, ವಿನೋದ್ ಮೆಂಡನ್, ಶಿವಪ್ಪ ನಂತೂರು, ಪ್ರಜ್ವಲ್, ರವಿ , ಗೀತಾ, ಪ್ರಸನ್ನ, ನಾಗೇಶ್, ಅರುಣ್ ವೀರನಗರ, ನವೀನ್ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.
Comments are closed.