ಕರಾವಳಿ

ಪೊಲೀಸರ ಜೊತೆ ಸೇರಿ ಆರೋಪಿಗಳ ಐಷಾರಾಮಿ ಕಾರು ಮಾರಾಟ : ಬ್ರೋಕರ್‌ ಬಂಧನ

Pinterest LinkedIn Tumblr

ಮಂಗಳೂರು, ಎಪ್ರಿಲ್. 23: ಮಂಗಳೂರು ಸಿಸಿಬಿ ವಶದಲ್ಲಿದ್ದ ಆರೋಪಿಗಳಿಗೆ ಸೇರಿದ ಜಾಗ್ವರ್ ಕಾರನ್ನು ಪೊಲೀಸರೊಂದಿಗೆ ಸೇರಿ ಮಾರಾಟ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ನಗರದ ಕದ್ರಿ ಪೊಲೀಸರು ಗುರುವಾರ ರಾತ್ರಿ ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಧಿತ ಆರೋಪಿ ನಗರದ ಫಳ್ನೀರ್ ನಿವಾಸಿ ದಿವ್ಯದರ್ಶನ (33) ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ವಿವರ :

ಜನರಿಗೆ ಹಣ ದ್ವಿಗುಣ ಮಾಡಿಕೊಡುವ ಆಮಿಷವೊಡ್ಡಿ 30 ಕೋಟಿ ರೂಪಾಯಿ ವಂಚಿಸಿದ್ದ ಕನ್ಸ್‌ಸ್ಟ್ರಕ್ಷನ್ ಆಯಂಡ್ ಬಿಲ್ಡರ್ ಪ್ರೈ.ಲಿ. ಸಂಸ್ಥೆಯೊಂದರ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಸಿಸಿಬಿ ಪೊಲೀಸರು, ವಂಚನೆ ಆರೋಪದಲ್ಲಿ ಬಂಧಿತರಾಗಿದ್ದ ಮೂವರು ಆರೋಪಿಗಳಿಂದ ಜಾಗ್ವಾರ್, ಬಿಎಂಡಬ್ಲೂ, ಪೋರ್ಷ್ ಸೇರಿ ಮೂರು ಐಷಾರಾಮಿ ಕಾರುಗಳನ್ನು ವಶಕ್ಕೆ ಪಡೆದಿದ್ದರು ಎಂಬ ಆರೋಪ ಕೇಳಿಬಂದಿತ್ತು.

ಪ್ರಕರಣದ ಪ್ರಾಥಮಿಕ ಹಂತದ ತನಿಖೆ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ವಿನಯ್‌ ಗಾಂವ್ಕರ್‌ ಅವರು ನಡೆಸಿದ್ದು, ಅದರ ವರದಿಯಲ್ಲಿ ಕಮಿಷನರ್‌ಗೆ ಸಲ್ಲಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಅಪರಾಧ ಪತ್ತೆದಳ ಹಿಂದಿನ ಎಸ್‌ಐ ಕಬ್ಬಳ್‌ರಾಜ್‌, ಸಿಸಿಬಿಯ ಆಶಿತ್‌, ರಾಜ ಹಾಗೂ ನಾರ್ಕೊಟಿಕ್‌ ಆಯಂಡ್‌ ಎಕನಾಮಿಕ್‌ ಪೊಲೀಸ್‌ ಠಾಣೆಯ ಇನ್‌ಸ್ಪೆಕ್ಟರ್‌ ರಾಮಕೃಷ್ಣ ಅವರ ಹೆಸರು ಹಾಗೂ ಬ್ರೋಕರ್‌ ದಿವ್ಯದರ್ಶನ್‌ ಹೆಸರನ್ನು ಉಲ್ಲೇಖ ಮಾಡಲಾಗಿತ್ತು.

ಬಳಿಕ ಈ ತನಿಖೆಯನ್ನು ಸಿಐಡಿ ಎಸ್‌ಪಿ ರೋಹಿಣಿ ಕಟ್ಟೋಚ್‌‌ ಅವರ ನೇತೃತ್ವದ ತಂಡ ಪ್ರಾರಂಭಿಸಿದ್ದು, ವರದಿಯನ್ನು ಸಿಐಡಿ ಡಿಜಿಗೆ ಸಲ್ಲಿಸಿದ್ದು, ವರದಿ ಹಿನ್ನೆಲೆಯಲ್ಲಿ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಈ ಹಿಂದೆ ಸಿಸಿಬಿಯಲ್ಲಿದ್ದ ಪಿಎಸ್‌ಐ ಕಬ್ಬಾಳ್‌ ರಾಜ್ ಹಾಗೂ ನಾರ್ಕೊಟಿಕ್ಸ್ ಆಯಂಡ್ ಎಕನಾಮಿಕ್ಸ್ ಠಾಣೆಯ ಇನ್‌ಸ್ಪೆಕ್ಟರ್ ರಾಮಕೃಷ್ಣ , ಸಿಸಿಬಿ ಹೆಡ್‌ಕಾನ್ಸ್‌ಟೇಬಲ್ ಆಶಿತ್ ಡಿಸೋಜ ಮತ್ತು ರಾಜಾ ಎಂಬವರನ್ನು ಅಮಾನತುಗೊಳಿಸಲಾಗಿತ್ತು.

ಇದೀಗ ವಂಚನೆ ಪ್ರಕರಣದ ಆರೋಪಿಗಳ ಬಳಿಯಿದ್ದ ಐಷಾರಾಮಿ ಕಾರು ಮಾರಾಟ ಪ್ರಕರಣದಲ್ಲಿ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸಿದ ಬ್ರೋಕರ್‌ ದಿವ್ಯದರ್ಶನ್‌ ನನ್ನು ಪೊಲೀಸರು ಬಂಧಿಸಿದ್ದಾರೆ.

ಈತ ಮತ್ತು ವ್ಯಕ್ತಿಯೊಬ್ಬರ ಮಧ್ಯೆ ಜಾಗ್ವರ್ ಕಾರು ಮಾರಾಟ ವ್ಯವಹಾರ ನಡೆದಿತ್ತು. ಈ ಬಗ್ಗೆ ದೂರು ದಾಖಲಿಸಿಕೊಂಡ ಕದ್ರಿ ಪೊಲೀಸರು ಗುರುವಾರ ಆರೋಪಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಪೊಲೀಸರು ಹಾಗೂ ದಿವ್ಯದರ್ಶನ್ ಸೇರಿ ಮೂವರು ಆರೋಪಿಗಳಿಂದ ಜಾಗ್ವಾರ್, ಬಿಎಂಡಬ್ಲೂ, ಪೋರ್ಷ್ ಸೇರಿ ಮೂರು ಐಷಾರಾಮಿ ಕಾರುಗಳನ್ನು ವಶಕ್ಕೆ ಪಡೆದಿದ್ದರು ಎಂಬ ಆರೋಪ ಕೇಳಿಬಂದಿತ್ತು.

Comments are closed.