ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಗೆ ಬಹರೈನ್ ನಿಂದ ತುರ್ತು ಆಕ್ಸಿಜನ್ ಸರಬರಾಜು ಮಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹಾಗೂ ಸಂಸದರಾದ ನಳಿನ್ ಕುಮಾರ್ ಕಟೀಲ್ ಅಭಿನಂದನೆ ಸಲ್ಲಿಸಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿಶೇಷ ಪ್ರಯತ್ನದಿಂದ ಕೊಲ್ಲಿ ರಾಷ್ಟ್ರವಾದ ಬಹರೈನ್ ಭಾರತೀಯ ನೌಕಾಪಡೆಯ INS Talwar ಮೂಲಕ ದಕ್ಷಿಣ ಕನ್ನಡ ಜಿಲ್ಲೆಗೆ 40 ಮೆಟ್ರಿಕ್ ಟನ್ ಆಕ್ಸಿಜನ್ ಸರಬರಾಜು ಮಾಡಿದೆ. (20 ಮೆಟ್ರಿಕ್ ಟನ್ ಆಕ್ಸಿಜನ್ ಬೆಂಗಳೂರಿಗೆ ಕಳುಹಿಸಲಾಗಿದ್ದು ಇನ್ನುಳಿದ 20 ಟನ್ ಲಿಕ್ವಿಡ್ ಆಕ್ಸಿಜನ್ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗೆ ಬಳಸಿಕೊಳ್ಳಲಾಗುತ್ತದೆ)
ಬುಧವಾರ ನವ ಮಂಗಳೂರು ಬಂದರಿಗೆ ಬಹರೈನ್ ನಿಂದ ಆಕ್ಸಿಜನ್ ಹೊತ್ತು ಆಗಮಿಸಿದ INS Talwar ಅನ್ನು ಭಾರತೀಯ ಜನತಾ ಪಾರ್ಟಿಯ ರಾಜ್ಯ ಅಧ್ಯಕ್ಷರು, ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರೊಂದಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಬರಮಾಡಿಕೊಂಡ ಬಳಿಕ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಅಭಿನಂದನೆ ಸಲ್ಲಿಸಿದರು.
ಈ ವೇಳೆ ಶಾಸಕ ಡಾ.ಭಾರತ್ ಶೆಟ್ಟಿ ಮಂಗಳೂರು ಮೇಯರ್ ಪ್ರೇಮನಂದ ಶೆಟ್ಟಿ, ಎನ್‌ಎಂಪಿಟಿ ಅಧ್ಯಕ್ಷ ಡಾ.ವಿ.ವಿ.ರಮಣ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಕೋಸ್ಟ್ ಗಾರ್ಡ್ ಡಿಐಜಿ ಎಸ್.ಬಿ.ವೆಂಕಟೇಶ್, ಕೆಎಫ್‌ಡಿಸಿಯ ನಿತಿನ್ ಕುಮಾರ್, ಕಸ್ಟಮ್ಸ್ ಅಯುಕ್ತರು, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯವರು, ಎನ್‌ಎಂಪಿಟಿಯ ಹಿರಿಯ ಅಧಿಕಾರಿಗಳು, ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಅಧ್ಯಕ್ಷರಾದ ವಿಜಯ್ ಕುಮಾರ್ ಶೆಟ್ಟಿ, ನೌಕಾಪಡೆ ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ಹಾಗೂ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.
Comments are closed.